ಬೆಂಗಳೂರು: ‘ರೈತ ಹುತಾತ್ಮ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಜುಲೈ 21ರಂದು ಹುಬ್ಬಳ್ಳಿಯ ಕಿತ್ತೂರು ರಾಣಿ ಚನ್ನಮ್ಮ ವೃತ್ತದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಆಯೋಜಿಸಲಾಗಿದೆ’ ಎಂದು ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರೈತ ಹುತಾತ್ಮ ದಿನದ ಪ್ರಯುಕ್ತ ನರಗುಂದ, ನವಲಗುಂದ, ಚಿಕ್ಕನರಗುಂದ ಹಾಗೂ ಅಳಗವಾಡಿಯಲ್ಲಿರುವ ಹುತಾತ್ಮ ರೈತರ ವೀರಗಲ್ಲುಗಳಿಗೆ ಗೌರವ ಸಲ್ಲಿಸಲಾಗುವುದು. ಮಹದಾಯಿ ವಿಚಾರದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ರಾಜಕೀಯ ಮಾಡುತ್ತಿದ್ದು, ಇದನ್ನು ಖಂಡಿಸಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.
ಸಂಘದ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ಪ್ರಧಾನ ಕಾರ್ಯದರ್ಶಿ ವೀರಭದ್ರಸ್ವಾಮಿ, ಕಾರ್ಯದರ್ಶಿ ಸುರೇಶ್ ಹುಸ್ಕೂರ್ ಸುದ್ದಿಗೋಷ್ಠಿಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.