ADVERTISEMENT

10ಕ್ಕೆ ರೈತರ ಸಮ್ಮೇಳನ: ಡಿಕೆಶಿ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2020, 19:33 IST
Last Updated 6 ಅಕ್ಟೋಬರ್ 2020, 19:33 IST

ಬೆಂಗಳೂರು: ‘ಪಕ್ಷದ ವತಿಯಿಂದ ಇದೇ 10ರಂದು ಮಂಡ್ಯದ ಅಂಬೇಡ್ಕರ್‌ ಭವನದಲ್ಲಿ ರಾಜ್ಯ ಮಟ್ಟದ ರೈತರ ಸಮ್ಮೇಳನ ಹಮ್ಮಿ
ಕೊಳ್ಳಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಈ ಸಮ್ಮೇಳನ ಪಕ್ಷಾತೀತ ಕಾರ್ಯಕ್ರಮ. ಆರು ಜನ ರೈತ ಮುಖಂಡರು ಕಾರ್ಯಕ್ರಮದಲ್ಲಿ ಮಾತನಾಡಲಿದ್ದು, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕೂಡಾ ಭಾಗವಹಿಸಲಿದ್ದಾರೆ’ ಎಂದರು.

ಸಹಿ ಸಂಗ್ರಹ ಅಭಿಯಾನ: ‘ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನಿರ್ದೇಶನದಂತೆ ರೈತ ವಿರೋಧಿ ಕಾಯ್ದೆಗಳ ವಿರುದ್ಧ ದೇಶದಾದ್ಯಂತ 2 ಕೋಟಿ ಸಹಿ ಸಂಗ್ರಹಿಸಲಾಗುವುದು. ಈ ಸಹಿಗಳಿರುವ ಮನವಿಯನ್ನು ಸೋನಿಯಾ ಗಾಂಧಿ ಅವರು ರಾಷ್ಟ್ರ
ಪತಿಗೆ ಸಲ್ಲಿಸುವ ಮೂಲಕ, ರೈತ ವಿರೋಧಿ ಕಾಯ್ದೆಗಳ ರದ್ದತಿಗೆ ಮನವಿ ಮಾಡಲಿದ್ದಾರೆ’ ಎಂದರು.

ADVERTISEMENT

ಕೇಂದ್ರ ಸಚಿವರಿಂದಲೇ ರಾಜೀನಾಮೆ: ‘ಕೇಂದ್ರದ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಅಕಾಲಿ ದಳದ ಸಂಸದೆ ಹರ್‌ ಸಿಮ್ರತ್‌ ಕೌರ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರೈತರ ವಿರುದ್ಧ ಕೇಂದ್ರ ಸರ್ಕಾರ ನಿಂತಿರುವುದಕ್ಕೆ ಇದೇ ಸಾಕ್ಷಿ’
ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.