ಪ್ರಾತಿನಿಧಿಕ ಚಿತ್ರ
– ಪ್ರಜಾವಾಣಿ ಚಿತ್ರ
ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿ ಭೂಸ್ವಾಧೀನ ಮಾಡಿಕೊಂಡಿರುವ ಜಮೀನಿಗೆ ಮಾರುಕಟ್ಟೆ ದರ ನೀಡುವಂತೆ ಆಗ್ರಹಿಸಿ ಜುಲೈ 12ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ದೇವನಹಳ್ಳಿ ಚನ್ನರಾಯಪಟ್ಟಣ ರೈತ ಸಮಿತಿ ತಿಳಿಸಿದೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸಂಚಾಲಕರಾದ ಶ್ರೀನಿವಾಸ್, ದೊಡ್ಡೇಗೌಡ, ರಂಗಣ್ಣ, ಜಗದೀಶ್, ಚನ್ನಕೇಶವ, ‘ರಾಜ್ಯ ಸರ್ಕಾರ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ವ್ಯಾಪ್ತಿಯ 1,777ಎಕರೆ ಜಮೀನನನ್ನು ಭೂಸ್ವಾಧಿನಪಡಿಸಿಕೊಳ್ಳುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ಈಗಿನ ಮಾರುಕಟ್ಟೆ ದರ ನೀಡಬೇಕು. ದೇವನಹಳ್ಳಿ ಸುತ್ತಮುತ್ತ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ನಿರ್ಮಾಣಕ್ಕೆ ಜಮೀನು ಕೊಡುವುದಕ್ಕೆ ನಮ್ಮ ಬೆಂಬಲವಿದೆ. ಯಾವುದೇ ಕಾರಣಕ್ಕೂ ಈ ಭಾಗವನ್ನು ಹಸಿರು ವಲಯವನ್ನಾಗಿ ಘೋಷಿಸಬಾರದು’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.