ADVERTISEMENT

ರೈತರಿಂದ ವಿಧಾನಸೌಧ ಮುತ್ತಿಗೆ ಇಂದು

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2020, 21:28 IST
Last Updated 20 ಸೆಪ್ಟೆಂಬರ್ 2020, 21:28 IST

ಬೆಂಗಳೂರು: ವಿಧಾನಮಂಡಲ ಅಧಿವೇಶನದ ಮೊದಲ ದಿನವಾದ ಸೋಮವಾರವೇ (ಸೆ. 21) ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರೈತ ಸಂಘಟನೆಗಳು ಮುಂದಾಗಿವೆ.

‘ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಬೆಳಿಗ್ಗೆ 11.15ಕ್ಕೆ ರೈಲು ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ಹೊರಟು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ತಿಳಿಸಿದ್ದಾರೆ.

‘ರೈತ ವಿರೋಧಿ ಸುಗ್ರೀವಾಜ್ಞೆಯನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ವಿಧಾನಮಂಡಲ ಅಧಿವೇಶನ ಮುಗಿಯುವರೆಗೆ ಮೌರ್ಯ ವೃತ್ತದ ಬಳಿಯ ಮಹಾತ್ಮಾ ಗಾಂಧಿ ಪ್ರತಿಮೆ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು’ ಎಂದೂ ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.