ADVERTISEMENT

ಹಾಲಿನ ಖರೀದಿ‌‌ ದರ ಏರಿಕೆಗೆ ಒತ್ತಾಯ: ಕೆಎಂಎಫ್ ಕಚೇರಿ ಎದುರು ಬೃಹತ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2025, 8:03 IST
Last Updated 10 ಫೆಬ್ರುವರಿ 2025, 8:03 IST
   

ಬೆಂಗಳೂರು: ಹಾಲಿನ ಖರೀದಿ ದರ ಹೆಚ್ಚಿಸಬೇಕು, ಪಶು ಆಹಾರದ ಬೆಲೆ ಕಡಿತಗೊಳಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ನೂರಾರು ರೈತರು ಕರ್ನಾಟಕ ಹಾಲು ಒಕ್ಕೂಟ ಮಹಮಂಡಳ( ಕೆಎಂಎಫ್) ಕೇಂದ್ರ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಆಗಮಿಸಿದ ನೂರಾರು ರೈತರು, ರೈತ ಮಹಿಳೆಯರು ಕೇಂದ್ರ ಕಚೇರಿ ಎದುರು ಜಮಾಯಿಸಿ, ಪ್ರತಿಭಟನೆ‌ ನಡೆಸಿದರು.

'ಸರ್ಕಾರ ಹಾಲಿಗೆ ನೀಡುವ ಪ್ರೋತ್ಸಾಹಧನವನ್ನು ಪ್ರತಿ ಲೀಟರ್‌ಗೆ₹ 5 ರಿಂದ ₹10ಕ್ಕೆ ಹೆಚ್ಚಿಸಬೇಕು. ಪಶು ಆಹಾರಕ್ಕೆ ಬಳಸುವ ಮೆಕ್ಕೆಜೋಳವನ್ನು ರೈತರಿಂದಲೇ ನೇರವಾಗಿ ಖರೀದಿಸಬೇಕು' ಎಂದು ಒತ್ತಾಯಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.