ADVERTISEMENT

ಭೂಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತಸಂಘ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2020, 22:26 IST
Last Updated 10 ಆಗಸ್ಟ್ 2020, 22:26 IST
ಸಂಘಟನೆಯ ಕಾರ್ಯಕರ್ತರು ಯಲಹಂಕದ ಮಿನಿವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು.
ಸಂಘಟನೆಯ ಕಾರ್ಯಕರ್ತರು ಯಲಹಂಕದ ಮಿನಿವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು.   

ಯಲಹಂಕ: ಭೂಸುಧಾರಣಾ ಹಾಗೂ ಎಪಿಎಂಸಿ ಕಾಯ್ದೆಗೆ ಮಾಡಿರುವ ತಿದ್ದುಪಡಿಯನ್ನು ಕೂಡಲೇ ರದ್ಧುಪಡಿಸಬೇಕೆಂದು ಒತ್ತಾಯಿಸಿ ರೈತನಾಯಕ ಪ್ರೊ.ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ಸದಸ್ಯರು ಮಿನಿವಿಧಾನಸೌಧದ ಮುಂಭಾಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಸಂಘದ ರಾಜ್ಯ ಘಟಕದ ಅಧ್ಯಕ್ಷ ವಿ.ಆರ್.ನಾರಾಯಣರೆಡ್ಡಿ, ’ಕೊರೊನಾ ಸೋಂಕಿನಿಂದ ಬೆಳೆದ ಬೆಳೆಗಳಿಗೆ ಸರಿಯಾದ ಮಾರುಕಟ್ಟೆ ಸಿಗದೆ ರೈತರು ಈಗಾಗಲೇ ಸಂಕಷ್ಟದಲ್ಲಿದ್ದು, ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಉದ್ಯಮಿಗಳ ಪರವಾಗಿ ಕಾಯ್ದೆಗಳನ್ನು ರೂಪಿಸುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಮುಖಂಡ ಕುಬೇರಪ್ಪ ಮಾತನಾಡಿ, ’ಭೂಸುಧಾರಣೆ ಕಾಯ್ದೆಯ ಕಲಂ 79ಎ, 79ಬಿ ಹಾಗೂ 80ಕ್ಕೆ ಮಾಡಿರುವ ತಿದ್ದುಪಡಿಯನ್ನು ಕೂಡಲೇ ರದ್ಧುಪಡಿಸಬೇಕು‘ ಎಂದು ಆಗ್ರಹಿಸಿದರು.

ADVERTISEMENT

ತಹಶೀಲ್ದಾರ್ ಎನ್.ರಘುಮೂರ್ತಿ ಮನವಿ ಸ್ವೀಕರಿಸಿದರು. ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ನಾಗರತ್ನಮ್ಮ, ರಾಜ್ಯ ಸಂಚಾಲಕ ಬಸವರಾಜು, ರೈತ ಮುಖಂಡರಾದ ಹರೀಶ್ ಅದ್ದೆ, ಪ್ರಕಾಶ್, ಮಂಜುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.