ADVERTISEMENT

ಮಾನವೀಯತೆ ಮೆರೆದ ಕೆಎಸ್‌ಆರ್‌ಟಿಸಿ ಚಾಲಕ, ನಿರ್ವಾಹಕಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 18 ಮೇ 2023, 20:48 IST
Last Updated 18 ಮೇ 2023, 20:48 IST
ಚಿಕ್ಕಮಗಳೂರು ಘಟಕದ ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಎಚ್.ಬಿ.ಕುಮಾರಸ್ವಾಮಿ ಮತ್ತು  ನಿರ್ವಾಹಕಿ ಎಸ್. ವಸಂತಮ್ಮ ಅವರನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ .ಸತ್ಯವತಿ ಸನ್ಮಾನಿಸಿದರು. ನಿರ್ದೇಶಕ ಪ್ರಶಾಂತ್ ಕುಮಾರ್ ಮಿಶ್ರಾ ಇದ್ದರು.
ಚಿಕ್ಕಮಗಳೂರು ಘಟಕದ ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಎಚ್.ಬಿ.ಕುಮಾರಸ್ವಾಮಿ ಮತ್ತು  ನಿರ್ವಾಹಕಿ ಎಸ್. ವಸಂತಮ್ಮ ಅವರನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ .ಸತ್ಯವತಿ ಸನ್ಮಾನಿಸಿದರು. ನಿರ್ದೇಶಕ ಪ್ರಶಾಂತ್ ಕುಮಾರ್ ಮಿಶ್ರಾ ಇದ್ದರು.    

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಯೊಬ್ಬರಿಗೆ ಹೆರಿಗೆ ಮಾಡಿಸಿ ಮಾನವೀಯತೆ ತೋರಿದ ಬಸ್‌ ಚಾಲಕ ಹಾಗೂ ನಿರ್ವಾಹಕಿಯನ್ನು ಅಧಿಕಾರಿಗಳು ಅಭಿನಂದಿಸಿದರು.

ಬಸ್‌ ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುತ್ತಿತ್ತು. ಉದಯಪುರ ಸಮೀಪದ ಕೃಷಿ ಕಾಲೇಜು ಬಳಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಫಾತಿಮಾ (21) ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಸಮೀಪದಲ್ಲಿ ಯಾವುದೇ ಆಸ್ಪತ್ರೆಯಿಲ್ಲದ ಕಾರಣ ಮಾರ್ಗ ಮಧ್ಯದಲ್ಲಿಯೇ ಬಸ್‌ ನಿಲ್ಲಿಸಿ ಹೆರಿಗೆ ಮಾಡಿಸಿ ತಾಯಿ ಹಾಗೂ ಮಗುವಿನ ಜೀವ ಕಾಪಾಡಲಾಗಿತ್ತು. 

ಚಿಕ್ಕಮಗಳೂರು ಘಟಕದ ಕೆಎಸ್‌ಆರ್‌ಟಿಸಿ ಬಸ್‌ ನಿರ್ವಾಹಕಿ ಎಸ್. ವಸಂತಮ್ಮ ಹಾಗೂ ಬಸ್‌ ಚಾಲಕ ಎಚ್.ಬಿ.ಕುಮಾರಸ್ವಾಮಿ ಅವರು ಮಾನವೀಯತೆ ತೋರಿದ್ದರು. ಅವರಿಗೆ ಕ್ರಮವಾಗಿ ₹ 5 ಸಾವಿರ ಹಾಗೂ ₹ 2 ಸಾವಿರ ಬಹುಮಾನ ನೀಡಿ ಗೌರವಿಸಲಾಯಿತು.

ADVERTISEMENT

ನಿಗಮದ ಚಾಲನಾ ಸಿಬ್ಬಂದಿ ಬಸ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರೊಂದಿಗೆ ಉತ್ತಮ ನಡವಳಿಕೆ ತೋರಿ ಅವರ ಅಗತ್ಯಗಳಿಗೆ ಸ್ಪಂದಿಸುವುದರಲ್ಲಿ ಮುಂಚೂಣಿಯಲ್ಲಿದ್ದಾರೆ. ವಸಂತಮ್ಮ ಅವರು ಮಾನವೀಯ ಕೆಲಸ ಮಾಡಿದ್ದಾರೆ ಎಂದು ಕೆಎಸ್ಆರ್‌ಟಿಸಿ ಅಧಿಕಾರಿಗಳು ಶ್ಲಾಘಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.