ADVERTISEMENT

ಮೈಕೊ ಲೇಔಟ್ ಪೊಲೀಸ್ ಠಾಣೆಯ ಮಹಿಳಾ ಕಾನ್‌ಸ್ಟೆಬಲ್ ಮಂಜುಶ್ರೀ ಆತ್ಮಹತ್ಯೆ

ಮಂಜುಶ್ರೀ ಅವರು ಇತ್ತೀಚೆಗೆ ಶಿವಾಜಿನಗರ ಪೊಲೀಸ್ ಠಾಣೆಗೆ ನಿಯೋಜನೆಗೊಂಡಿದ್ದರು: ಹಾರೋಹಳ್ಳಿಯ ದ್ವಾವಸಂದ್ರದಲ್ಲಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2024, 4:55 IST
Last Updated 17 ಫೆಬ್ರುವರಿ 2024, 4:55 IST
<div class="paragraphs"><p>ಮಂಜುಶ್ರೀ</p></div>

ಮಂಜುಶ್ರೀ

   

ಹಾರೋಹಳ್ಳಿ: ಬೆಂಗಳೂರು ನಗರದ ಮೈಕೊ ಲೇಔಟ್ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್ ಆಗಿದ್ದ ತಾಲ್ಲೂಕಿನ ದ್ಯಾವಸಂದ್ರದ ಮಂಜುಶ್ರೀ (27) ಅವರು ಶುಕ್ರವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಜುಶ್ರೀ ಅವರು ಇತ್ತೀಚೆಗೆ ಶಿವಾಜಿನಗರ ಪೊಲೀಸ್ ಠಾಣೆಗೆ ನಿಯೋಜನೆಗೊಂಡಿದ್ದರು. ಶುಕ್ರವಾರ ದ್ಯಾವಸಂದ್ರ ಗ್ರಾಮಕ್ಕೆ ಬಂದಿದ್ದ ಅವರು, ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ.

ADVERTISEMENT

ಸ್ಥಳಕ್ಕೆ ಹಾರೋಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.