ಬೆಂಗಳೂರು: ಸ್ನೇಹಿತರಿಬ್ಬರ ನಡುವೆ ಮೊಬೈಲ್ ವಿಚಾರಕ್ಕೆ ನಡೆದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಿ.ಕೆ.ಅಚ್ಚುಕಟ್ಟು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಟಿ.ನರಸೀಪುರ ಮೂಲದ ಶ್ರೀನಿವಾಸ್ (45) ಕೊಲೆಯಾದವ. ಈ ಸಂಬಂಧ ಆರೋಪಿ ನಾಗರಾಜ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಆರೋಪಿ ನಾಗರಾಜ್ ಹಾಗೂ ಕೊಲೆಯಾದ ಶ್ರೀನಿವಾಸ್ ಟಿ.ನರಸೀಪುರ ತಾಲ್ಲೂಕಿನ ತಾಯೂರು ಗ್ರಾಮದವರು. ನಗರದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಇಬ್ಬರೂ ಕತ್ರಿಗುಪ್ಪೆಯ ಶ್ರೀನಿವಾಸನಗರದಲ್ಲಿ ಬಾಡಿಗೆ ರೂಮ್‌ನಲ್ಲಿ ವಾಸವಾಗಿದ್ದರು. ನಾಗರಾಜ್‌ನ ಮೊಬೈಲ್ ಅನ್ನು ಶ್ರೀನಿವಾಸ ತೆಗೆದುಕೊಂಡು ನೋಡುತ್ತಿದ್ದ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ.
ಕೋಪದಲ್ಲಿ ನಾಗರಾಜ್ ಮನೆಯಲ್ಲಿದ್ದ ವಾಟರ್ ಹೀಟರ್‌ನಿಂದ ಶ್ರೀನಿವಾಸ್ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿ ಪರಾರಿಯಾಗಿದ್ದ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಪೊಲೀಸರು ಆರೋಪಿ ನಾಗರಾಜ್‌ನನ್ನು ಮೈಸೂರಿನಲ್ಲಿ ಬಂಧಿಸಿದ್ದಾರೆ. ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.