
ಬೆಂಗಳೂರು: ‘ಕೋಗಿಲು ಲೇಔಟ್ ಸಂತ್ರಸ್ತರಿಗೆ ಕೂಡಲೇ ಶಾಶ್ವತ ವಸತಿ ಕಲ್ಪಿಸಬೇಕು ಹಾಗೂ ಪುನರ್ವಸತಿ ಅವಧಿಯಲ್ಲಿ ಆರೋಗ್ಯ, ಆಹಾರ ಮತ್ತು ಮೂಲ ಸೌಕರ್ಯಗಳನ್ನು ಒದಗಿಸಬೇಕು. ಸೂಕ್ತ ಪುನರ್ವಸತಿ ಕಲ್ಪಿಸುವವರೆಗೂ ಹೋರಾಟ ಮುಂದುವರಿಯಲಿದೆ’ ಎಂದು ಎಸ್‌ಐಓ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಹಯಾನ್ ಹೇಳಿದರು.
ಕೋಗಿಲು ಬಡಾವಣೆ ಕೊಳೆಗೇರಿ ನಿವಾಸಿಗಳ ಹೋರಾಟ ಸಮಿತಿ ತೆರವು ಕಾರ್ಯಾಚರಣೆ ನಡೆದ ಸ್ಥಳದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ‘ಸಂತ್ರಸ್ತರಿಗೆ ಯಾವುದೇ ನೋಟಿಸ್ ಅಥವಾ ಮುನ್ಸೂಚನೆ ನೀಡದೆ ಏಕಾಏಕಿ ತೆರವು ಕಾರ್ಯಾಚರಣೆ ನಡೆಸಿರುವುದು ಅತ್ಯಂತ ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಪ್ರಜಾಪ್ರಭುತ್ವವು ಜನರಿಂದ, ಜನರಿಗಾಗಿ ಮತ್ತು ಜನರಿಗೋಸ್ಕರ ಅಸ್ತಿತ್ವದಲ್ಲಿದೆ ಎಂಬುದು ಸರ್ಕಾರಕ್ಕೆ ನೆನಪಿರಬೇಕು. ಪ್ರಜೆಗಳ ಕಲ್ಯಾಣಕ್ಕೆ ಸದಾ ಆದ್ಯತೆ ನೀಡಬೇಕು’ ಎಂದು ಅಭಿಪ್ರಾಯಪಟ್ಟರು.
ಪ್ರತಿಭಟನೆಯಲ್ಲಿ ಎಸ್‌ಐಓ ಸದಸ್ಯರಾದ ವಸೀಮ್ ಮತ್ತು ನದೀಮ್ ಪಾಲ್ಗೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.