
ಪ್ರಜಾವಾಣಿ ವಾರ್ತೆ
ಬೆಂಗಳೂರು: ಚಿತ್ರ ನಿರ್ದೇಶಕ, ಲೇಖಕ ಎನ್.ಎಸ್. ಶಂಕರ್ ಅವರ ಪತ್ನಿ ಉಮಾರಾಣಿ (62) ಶನಿವಾರ ನಿಧನರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಒಂದು ವರ್ಷದಿಂದ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಪತಿ ಶಂಕರ್ ಹಾಗೂ ಮಗ ರಾಹುಲ್ ಇದ್ದಾರೆ. ಸಂಜೆ ಅಂತ್ಯಕ್ರಿಯೆ ನೆರವೇರಿತು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಉಮಾರಾಣಿ ಅವರ ತಂದೆ ಎಲ್.ಎಚ್. ಬಾಲಕೃಷ್ಣ ಅವರು ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. 1996ರಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.