
ಸಂಚಾರ ನಿಯಮ ಉಲ್ಲಂಘನೆ: ಶೇ 50ರ ರಿಯಾಯಿತಿ– ₹7 ಕೋಟಿ ದಂಡ ಸಂಗ್ರಹ
(ಸಾಂದರ್ಭಿಕ ಚಿತ್ರ)
ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶೇ 50ರ ರಿಯಾಯಿತಿ ಅಡಿ ದಂಡ ಪಾವತಿಸಲು ರಾಜ್ಯ ಸರ್ಕಾರವು ಕಲ್ಪಿಸಿದ್ದ ಅವಕಾಶವನ್ನು ಬಳಸಿಕೊಂಡು, ಇದುವರೆಗೂ 2,47,777 ವಾಹನಗಳ ಮಾಲೀಕರು ದಂಡ ಪಾವತಿ ಮಾಡಿದ್ದಾರೆ. ಕಳೆದ ಎಂಟು ದಿನಗಳಲ್ಲಿ ₹7.02 ಕೋಟಿ ದಂಡ ಸಂಗ್ರಹವಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಸಾರಿಗೆ ಇಲಾಖೆ ಹಾಗೂ ಸಂಚಾರ ಪೊಲೀಸರು ಸಲ್ಲಿಸಿದ್ದ ಪ್ರಸ್ತಾವಕ್ಕೆ ಅನುಮೋದನೆ ನೀಡಿದ್ದ ರಾಜ್ಯ ಸರ್ಕಾರವು, ನ.21ರಿಂದ ದಂಡ ಪಾವತಿಸಲು ಅವಕಾಶ ನೀಡಿತ್ತು.
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಡಿ.12ರ ವರೆಗೆ ರಿಯಾಯಿತಿ ಅಡಿ ದಂಡ ಪಾವತಿಗೆ ಅವಕಾಶವಿದೆ. ಕೆಎಸ್‌ಪಿ ಆ್ಯಪ್, ಬಿಟಿಪಿ, ಬೆಂಗಳೂರು ಒನ್, ಕರ್ನಾಟಕ ಒನ್, ಟ್ರಾಫಿಕ್ ಪೊಲೀಸರ ಬಳಿಯೂ ತಮ್ಮ ದಂಡದ ರಿಯಾಯಿತಿ ಮೊತ್ತವನ್ನು ವಾಹನಗಳ ಮಾಲೀಕರು ಪಾವತಿಸಬಹುದು. ಡಿ.12ರ ನಂತರ ಪೂರ್ಣ ಪ್ರಮಾಣದಲ್ಲಿ ದಂಡ ಪಾವತಿಸಬೇಕಾಗುತ್ತದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.