ಬೆಂಗಳೂರು: ಮದ್ಯಪಾನ ಮಾಡಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ಚಾಲಕರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ ನಗರದ ವಿವಿಧ ಠಾಣೆಯ ಸಂಚಾರ ಪೊಲೀಸರು, 58 ಚಾಲಕರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
‘ಸೋಮವಾರ ಬೆಳಿಗ್ಗೆ 7ರಿಂದ 10ರ ವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ಕಾರ್ಯಾಚರಣೆಯಲ್ಲಿ 4,559 ವಾಹನಗಳ ತಪಾಸಣೆ ನಡೆಸಲಾಯಿತು. ಈ ವೇಳೆ ಮದ್ಯ ಸೇವಿಸಿ ವಾಹನ ಚಾಲನೆ ಮಾಡುತ್ತಿದ್ದವರ ವಿರುದ್ಧ ಮೋಟಾರು ವಾಹನಗಳ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಯಿತು. ಚಾಲಕರ ಚಾಲನಾ ಪರವಾನಗಿಯನ್ನು ಅಮಾನತು ಮಾಡುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಕಾರ್ಯಾಚರಣೆ ಮುಂದುವರಿಯಲಿದೆ’ ಎಂದು ಸಂಚಾರ ವಿಭಾಗದ ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.