
ಪ್ರಜಾವಾಣಿ ವಾರ್ತೆ
ಬೆಂಗಳೂರು: ಇಂದಿರಾ ಗಾಂಧಿ ಅವರ ಫೋಟೊವನ್ನು ಹಿಟ್ಲರ್ ರೀತಿ ಗ್ರಾಫಿಕ್ಸ್ ಮಾಡಿ ಬಿಜೆಪಿ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಹಾಕಲಾಗಿದೆ ಎಂದು ಆರೋಪಿಸಿ ನೀಡಿರುವ ದೂರು ಆಧರಿಸಿ ಬಿಜೆಪಿ ಕರ್ನಾಟಕ ‘ಎಕ್ಸ್’ ಖಾತೆದಾರರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ಅವರು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
‘ಅವಹೇಳನಕಾರಿಯಾಗಿ ಫೋಸ್ಟ್ ಹಾಕಲಾಗಿದೆ. ಸಮಾಜದಲ್ಲಿ ಅಶಾಂತಿ ಉಂಟು ಮಾಡಿ ಧರ್ಮ ಮತ್ತು ಕೋಮುಗಳ ಮಧ್ಯೆ ವೈರತ್ವವನ್ನು ಉಂಟು ಮಾಡುವಂತೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಲಾಗಿದೆ’ ಎಂದು ಉಲ್ಲೇಖಿಸಿ ದೂರು ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.