ಬೆಂಗಳೂರು: ಎರಡನೇ ಪತ್ನಿ ಹಾಗೂ ಅವರ ಮಗಳಿಗೆ ಕಿರುಕುಳ ನೀಡಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಪಿಎಸ್ಐ ಟಿ.ಆರ್. ಶ್ರೀನಿವಾಸ್ ವಿರುದ್ಧ ಜೆ.ಸಿ. ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
‘ಜೆ.ಸಿ.ನಗರ ನಿವಾಸಿ, 37 ವರ್ಷದ ಮಹಿಳೆ ಅಂಚೆ ಮೂಲಕ ದೂರು ನೀಡಿದ್ದಾರೆ. ಪೋಕ್ಸೊ ಕಾಯ್ದೆ ಹಾಗೂ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಆರೋಪದಡಿ ಶ್ರೀನಿವಾಸ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
‘ಆರೋಪಿ ಶ್ರೀನಿವಾಸ್, ಬೆಂಗಳೂರು ಜಿಲ್ಲಾ ಪೊಲೀಸ್ ಎಸ್ಪಿ ಕಚೇರಿಯಲ್ಲಿ ಸದ್ಯ ಕೆಲಸ ಮಾಡುತ್ತಿದ್ದಾರೆ. ಮೊದಲ ಪತ್ನಿಯಿಂದ ದೂರವಾಗಿದ್ದ ಅವರು, ದೂರುದಾರ ಮಹಿಳೆ ಜೊತೆ ಎರಡನೇ ಮದುವೆಯಾಗಿದ್ದರು’ ಎಂದೂ ತಿಳಿಸಿವೆ.
ದೂರಿನ ವಿವರ: ‘ಪತಿ ಕಿರುಕುಳ ನೀಡಿದ್ದರಿಂದ ಆತನ ವಿರುದ್ಧ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದೆ. ಅದೇ ಠಾಣೆಯಲ್ಲಿ ಶ್ರೀನಿವಾಸ್ ಪರಿಚಯವಾಗಿತ್ತು. ನನ್ನನ್ನು, ನನ್ನ ಇಬ್ಬರು ಹೆಣ್ಣು ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳುವುದಾಗಿ ಆತ ಹೇಳಿದ್ದ’ ಎಂದು ದೂರಿನಲ್ಲಿ ಮಹಿಳೆ ಹೇಳಿದ್ದಾರೆ.
‘ನನ್ನನ್ನು ಗರ್ಭವತಿ ಮಾಡಿದ ಶ್ರೀನಿವಾಸ್, ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲಾರಂಭಿಸಿದ್ದ. ನೀಲಿ ಚಿತ್ರಗಳನ್ನು ನೋಡಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ, ಅಮಾನವೀಯವಾಗಿ ನಡೆದುಕೊಳ್ಳುತ್ತಿದ್ದ. ನನ್ನ ತಂಗಿ ಜೊತೆಯೂ ಆತ ಸಲುಗೆ ಇಟ್ಟುಕೊಂಡಿದ್ದ. ನನ್ನ 13 ವರ್ಷದ ಮಗಳ ಮೇಲೂ ಲೈಂಗಿಕ ದೌರ್ಜನ್ಯ ಎಸಗಿ ಕಿರುಕುಳ ನೀಡಿದ್ದಾನೆ’ ಎಂದೂ ದೂರಿನಲ್ಲಿ ತಿಳಿಸಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.