ಬೆಂಗಳೂರು: ಗಣ್ಯರ ವಿರುದ್ಧ ಅವಹೇಳನಕಾರಿ ವಿಡಿಯೊ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿರುವ ವ್ಯಕ್ತಿಯ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕುಶಾಲ್ ಹರವೇಗೌಡ ಅವರು ನೀಡಿರುವ ದೂರು ಆಧರಿಸಿ ‘ಕ್ರಿಮಿಕೀಟ’ ಹೆಸರಿನ ಖಾತೆದಾರನ ವಿರುದ್ಧ ಎಫ್‌ಐಆರ್ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
‘ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಅನೇಕ ಸಚಿವರ ವಿರುದ್ಧ ಆಧಾರವಿಲ್ಲದೇ ಅವಹೇಳನಕಾರಿ ವಿಡಿಯೊ ಹಾಗೂ ನಕಲಿ ಧ್ವನಿ ಸುರುಳಿಯನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿ ಗಣ್ಯರ ವ್ಯಕ್ತಿತ್ವಕ್ಕೆ ಧಕ್ಕೆ ತಂದು, ಸಾರ್ವಜನಿಕರಲ್ಲಿ ತಪ್ಪು ಸಂದೇಶ ಹರಡಿಸುತ್ತಿರುವ ‘ಕ್ರಿಮಿಕೀಟ’ ಎಂಬ ಫೇಸ್‌ಬುಕ್ ಖಾತೆಯ ಹಿಂದಿರುವ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು’ ಎಂದು ಕುಶಾಲ್ ಹರವೇಗೌಡ ನೀಡಿದ ದೂರು ಆಧರಿಸಿ ಎಫ್‌ಐಆರ್ ದಾಖಲು ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.