ಎಫ್‌ಐಆರ್
(ಸಾಂದರ್ಭಿಕ ಚಿತ್ರ)
ಬೆಂಗಳೂರು: ರಸ್ತೆಯಲ್ಲಿನ ರಂಪಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾರು ಚಾಲಕರ ವಿರುದ್ಧ ರಾಮಮೂರ್ತಿನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇಬ್ಬರು ವ್ಯಕ್ತಿಗಳು ಸಾರ್ವಜನಿಕವಾಗಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಆಗಸ್ಟ್ 2ರಂದು ರಾತ್ರಿ ಈ ಘಟನೆ ನಡೆದಿದೆ. ಕಾರೊಂದು ಮತ್ತೊಂದು ಕಾರಿಗೆ ಗುದ್ದಿದ ನಂತರ ಜಗಳವಾಗಿದೆ ಎಂದು ಪೊಲೀಸರು ಹೇಳಿದರು.
ಮದ್ಯದ ಅಮಲಿನಲ್ಲಿದ್ದ ಕಾರಿನ ಚಾಲಕ ಇಳಿದು ಮತ್ತೊಂದು ಕಾರಿನ ಚಾಲಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಆಗ ಇಬ್ಬರಿಗೂ ಮಾತಿಗೆ ಮಾತು ಬೆಳೆದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.
ಮದ್ಯ ಸೇವಿಸಿ ವಾಹನ ಚಲಾಯಿಸಿದ್ದಕ್ಕಾಗಿ ಸಂಚಾರ ಪೊಲೀಸರೂ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.