ADVERTISEMENT

ಕುಸುಮಾ, ಸಿದ್ದರಾಮಯ್ಯ ಕಾರು ಚಾಲಕ ವಿರುದ್ಧ ಎಫ್‍ಐಆರ್

ಆರ್‌.ಆರ್.ನಗರ ಉಪಚುನಾವಣೆ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2020, 4:02 IST
Last Updated 15 ಅಕ್ಟೋಬರ್ 2020, 4:02 IST
ಕಾಂಗ್ರೆಸ್‌ ಮುಖಂಡ ಸಿದ್ದರಾಮಯ್ಯ
ಕಾಂಗ್ರೆಸ್‌ ಮುಖಂಡ ಸಿದ್ದರಾಮಯ್ಯ   

ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಹಾಗೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ರಾಜರಾಜೇಶ್ವರಿ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್. ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನದ ಸಿಬ್ಬಂದಿ ವಿರುದ್ಧ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಈ ಬಗ್ಗೆ ದೂರು ನೀಡಿರುವ ಕಾಟನ್‍ಪೇಟೆಯ ಎಎಸ್‍ಐ ನಾಗರಾಜ್ ಅವರು, ‘ರಾಜರಾಜೇಶ್ವರಿ ನಗರ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಸಂಬಂಧ ಬಂದೋಬಸ್ತ್ ಕರ್ತವ್ಯಕ್ಕೆ ನೇಮಿಸಲಾಗಿತ್ತು. ಅಲ್ಲಿನ ಪಾಲಿಕೆ ಕಚೇರಿಯ 100 ಮೀಟರ್ ವ್ಯಾಪ್ತಿಯಲ್ಲಿ ಬ್ಯಾರಿಕೇಡ್ ಹಾಕಿ, ಯಾರನ್ನೂ ಒಳಬಿಡದಂತೆ ಸೂಚಿಸಲಾಗಿತ್ತು.

‘ಆದರೆ, ಈ ವೇಳೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಅವರು ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರೊಂದಿಗೆ ಬ್ಯಾರಿಕೇಡ್‍ನಿಂದ ಒಳಬರಲು ಯತ್ನಿಸಿದರು. ಅವರನ್ನು ತಡೆದರೂ ಸಿದ್ದರಾಮಯ್ಯ ಅವರ ಬೆಂಗಾವಲು ವಾಹನದ ಪೊಲೀಸರು ಬ್ಯಾರಿಕೇಡ್ ಸರಿಸಿ, ವಾಹನಗಳನ್ನು ಪಾಲಿಕೆ ಕಚೇರಿ ಮುಂಭಾಗಕ್ಕೆ ತಂದರು’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.