ಬೆಂಗಳೂರು: ಅತ್ತೆ ಹಾಗೂ ಮಾವನ ಮೇಲೆ ಹಲ್ಲೆ ನಡೆಸಿದ ಆರೋಪದಡಿ ವಿಕ್ಟೋರಿಯಾ ಆಸ್ಪತ್ರೆಯ ವೈದ್ಯೆ ಪ್ರಿಯದರ್ಶಿನಿ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ವೈದ್ಯೆ ಹಲ್ಲೆ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಇ.ಎಸ್.ಐ ಆಸ್ಪತ್ರೆಯ ದಂತ ವೈದ್ಯ ನವೀನ್ ಕುಮಾರ್ ಮತ್ತು ವಿಕ್ಟೋರಿಯಾ ಆಸ್ಪತ್ರೆ ವೈದ್ಯೆ ಪ್ರಿಯದರ್ಶಿನಿ 2007ರಲ್ಲಿ ವಿವಾಹ ಆಗಿದ್ದರು. ದಂಪತಿ ಮಧ್ಯೆ ವೈಮನಸ್ಸು ಉಂಟಾಗಿ ವಿಚ್ಛೇದನ ಪಡೆಯಲು ಮುಂದಾಗಿದ್ದರು. ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ ಎಂದು ಮೂಲಗಳು ತಿಳಿಸಿವೆ.
‘ಅತ್ತೆ– ಮಾವನಿಗೆ ಪ್ರಿಯದರ್ಶಿನಿ ಕಿರುಕುಳ ನೀಡುತ್ತಿರುವ ಆರೋಪವಿದೆ. ಹೀಗಾಗಿ, ಪೋಷಕರೊಂದಿಗೆ ನವೀನ್ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಪ್ರಿಯದರ್ಶಿನಿ ಮಕ್ಕಳ ಜೊತೆ ವಾಸವಾಗಿದ್ದಾರೆ. ಮಾರ್ಚ್ 10ರಂದು ರಾತ್ರಿ ಪ್ರಿಯದರ್ಶಿನಿ ಅವರು ವೃದ್ಧ ದಂಪತಿ ವಾಸವಾಗಿರುವ ಅನ್ನಪೂರ್ಣೇಶ್ವರಿ ನಗರದ ನಿವಾಸಕ್ಕೆ ಆಗಮಿಸಿ ಹಲ್ಲೆ ಮಾಡಿದ್ದಾರೆ ಎಂಬುದಾಗಿ ದೂರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಪ್ರಿಯದರ್ಶಿನಿಗೆ ನೋಟಿಸ್ ಜಾರಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.