ADVERTISEMENT

‘ಓ ಮೈ ಲವ್‌’ ನಿರ್ದೇಶಕನ ವಿರುದ್ಧ ಎಫ್‌ಐಆರ್

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2022, 21:30 IST
Last Updated 5 ಆಗಸ್ಟ್ 2022, 21:30 IST
   

ಬೆಂಗಳೂರು: ಅನುಮತಿ ಪಡೆಯದೇ ‘ಓ ಮೈ ಲವ್’ ಸಿನಿಮಾ ಜಾಹೀರಾತು ಹಾಕಿದ್ದ ಆರೋಪದಡಿ ನಿರ್ದೇಶಕ ಸ್ಮೈಲ್ ಸೀನು ಹಾಗೂ ಇತರರ ವಿರುದ್ಧ ಅನ್ನಪೂರ್ಣೇಶ್ವರಿನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

‘ಬಿಬಿಎಂಪಿ ಲಗ್ಗೆರೆ ಉಪವಿಭಾಗದ ಕಂದಾಯ ನಿರೀಕ್ಷಕ ಆರ್. ಅನಿಲ್‌ಕುಮಾರ್ ಅವರು ದೂರು ನೀಡಿದ್ದಾರೆ. ಆರೋಪಿ ಸ್ಮೈಲ್ ಸೀನು ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಚಿತ್ರದ ಪ್ರಚಾರಕ್ಕೆಂದು ನಗರದ ಹಲವೆಡೆ ಪೋಸ್ಟರ್‌ ಹಾಗೂ ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿದೆ. ಇದಕ್ಕೆ ಬಿಬಿಎಂಪಿ ಕಡೆಯಿಂದ ಅನುಮತಿ ಪಡೆದಿಲ್ಲ. ನಾಗರಬಾವಿ ಮುಖ್ಯರಸ್ತೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಬಿಬಿಎಂಪಿ ಅಧಿಕಾರಿಗಳು, ಪೋಸ್ಟರ್, ಫ್ಲೆಕ್ಸ್ ತೆರವುಗೊಳಿಸಿ ಠಾಣೆಗೆ ದೂರು ನೀಡಿದ್ದಾರೆ’ ಎಂದೂ ತಿಳಿಸಿವೆ. ಬಿಬಿಎಂಪಿ ಅಧಿಕಾರಿಯೊಬ್ಬರು, ‘ಹೈಕೋರ್ಟ್ ನಿರ್ದೇಶನದನ್ವಯ ನಗರದಲ್ಲಿ ಬ್ಯಾನರ್, ಫ್ಲೆಕ್ಸ್ ಹಾಗೂ ಇತರೆ ಜಾಹೀರಾತು ಮಾದರಿಗಳನ್ನು ನಿಷೇಧಿಸಲಾಗಿದೆ. ಇಷ್ಟಾದರೂ ಕೆಲವರು, ಜಾಹೀರಾತು ಪ್ರಕಟಿಸಿ ನಗರದ ಸೌಂದರ್ಯ ಹಾಳು ಮಾಡುತ್ತಿದ್ದಾರೆ. ಅಂಥವರ ವಿರುದ್ಧ ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.