ADVERTISEMENT

ಬೆಂಕಿ; ಹೊತ್ತಿ ಉರಿದ ಬಟ್ಟೆ ಅಂಗಡಿ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2019, 19:27 IST
Last Updated 6 ಸೆಪ್ಟೆಂಬರ್ 2019, 19:27 IST
ಬಟ್ಟೆ ಅಂಗಡಿಗೆ ತಗುಲಿದ್ದ ಬೆಂಕಿ
ಬಟ್ಟೆ ಅಂಗಡಿಗೆ ತಗುಲಿದ್ದ ಬೆಂಕಿ   

ಬೆಂಗಳೂರು: ಕೆ.ಜಿ.ಹಳ್ಳಿ ಬಳಿಯ ರಶಾದ್ ನಗರದಲ್ಲಿ ಬಟ್ಟೆ ಅಂಗಡಿಯೊಂದಕ್ಕೆ ಶುಕ್ರವಾರ ಮಧ್ಯಾಹ್ನ ಬೆಂಕಿ ತಗುಲಿದ್ದರಿಂದ, ಅಪಾರ ಪ್ರಮಾಣದ ಬಟ್ಟೆಗಳು ಸುಟ್ಟು ಕರಕಲಾಗಿವೆ.

‘ಮಸೂದ್ ಎಂಬುವರು ಗೋವಿಂದಪುರ ಮುಖ್ಯರಸ್ತೆಯಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದರು. ಅದೇ ಅಂಗಡಿಯಲ್ಲೇ ಅಗ್ನಿ ಅನಾಹುತ ಸಂಭವಿಸಿದೆ’ ಎಂದು ಕೆ.ಜಿ.ಹಳ್ಳಿ ಪೊಲೀಸರು ಹೇಳಿದರು.

‘ಸಣ್ಣದಾಗಿ ಕಾಣಿಸಿಕೊಂಡ ಬೆಂಕಿ, ಕ್ರಮೇಣ ಇಡೀ ಅಂಗಡಿಯನ್ನೇ ಆವರಿಸಿತ್ತು. ಅಂಗಡಿ ಮಾಲೀಕ ಹಾಗೂ ಸಿಬ್ಬಂದಿ ಹೊರಗೆ ಓಡಿಬಂದರು. ಅಕ್ಕ–ಪಕ್ಕದ ಅಂಗಡಿಗಳಿಗೂ ಬೆಂಕಿ ತಗಲುವ ಸಾಧ್ಯತೆ ಇತ್ತು. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸಿ ದೊಡ್ಡ ಅನಾಹುತ ತಪ್ಪಿಸಿದರು’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು.

ADVERTISEMENT

‘ಬೆಂಕಿ ಹೊತ್ತಿಕೊಳ್ಳಲು ವಿದ್ಯುತ್ ಶಾರ್ಟ್ ಸರ್ಕಿಟ್‌ ಕಾರಣವಿರಬಹುದು ಎಂಬ ಶಂಕೆ ಇದೆ. ತನಿಖೆಯಿಂದಲೇ ನಿಜಾಂಶ ಗೊತ್ತಾಗಬೇಕಿದೆ’ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.