ಬೆಂಕಿ ಅವಘಡ
(ಸಾಂಕೇತಿಕ ಚಿತ್ರ)
ಬೆಂಗಳೂರು: ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಸುಕಿನ ವೇಳೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಎರಡು ವಾಹನಗಳು ಭಸ್ಮವಾಗಿವೆ.
ಠಾಣಾ ವ್ಯಾಪ್ತಿಯ ವಾಲ್ಮೀಕಿನಗರ ರಸ್ತೆಯಲ್ಲಿ ಕಾರುಗಳನ್ನು ನಿಲುಗಡೆ ಮಾಡಲಾಗಿತ್ತು. ಮುಂಜಾನೆ ಒಂದು ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಅದರ ಬೆಂಕಿ ಕಿಡಿ ಮತ್ತೊಂದು ಕಾರಿಗೂ ತಾಕಿದ್ದರಿಂದ ಆ ಕಾರು ಸಹ ಭಸ್ಮವಾಗಿದೆ.
ಬೆಂಕಿ ಹೊತ್ತಿ ಉರಿಯುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕದ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅವರು ಸ್ಥಳಕ್ಕೆ ಬಂದು ಬೆಂಕಿ ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.
ಕಾರಿನ ಬ್ಯಾಟರಿಯಲ್ಲಿ ಉಂಟಾದ ಕಿಡಿಯಿಂದ ಬೆಂಕಿ ಅವಘಡ ಸಂಭವಿಸಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ. ತನಿಖೆ ಮುಂದುವರೆದಿದೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.