ADVERTISEMENT

ಅಗ್ನಿ ಅನಾಹುತ: ಮುನ್ನೆಚ್ಚರಿಕೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2024, 16:00 IST
Last Updated 27 ಮಾರ್ಚ್ 2024, 16:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಬೇಸಿಗೆ ಅವಧಿಯಲ್ಲಿ ಅತಿಯಾದ ತಾಪಮಾನದಿಂದ ಆರೋಗ್ಯ ಸಂಸ್ಥೆಗಳಲ್ಲಿ ಅಗ್ನಿ ಅನಾಹುತಗಳು ಸಂಭವಿಸುವ ಸಾಧ್ಯತೆಗಳಿವೆ. ಆದ್ದರಿಂದ ಮುನ್ನೆಚ್ಚರಿಗೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ. 

ಈ ಬಗ್ಗೆ ಇಲಾಖೆ ಆಯುಕ್ತ ಡಿ. ರಂದೀಪ್ ಸುತ್ತೋಲೆ ಹೊರಡಿಸಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿ ಎಲ್ಲ ಹಂತದ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ, ವೈದ್ಯಕೀಯ ಕಾಲೇಜುಗಳಲ್ಲಿ ಹಾಗೂ ಮಾನ್ಯತೆ ಪ‍ಡೆದ ಎಲ್ಲ ಆಸ್ಪತ್ರೆಗಳಲ್ಲಿ ಬೆಂಕಿ ನಂದಿಸುವ ಉಪಕರಣಗಳ ಲಭ್ಯತೆ, ಕಾರ್ಯಶೀಲತೆಯನ್ನು ಪರಿಶೀಲಿಸಬೇಕು. ಮುಂಜಾಗ್ರತಾ ಕ್ರಮಗಳ ಪಾಲನೆಯನ್ನೂ ಖಚಿತಪಡಿಸಿಕೊಳ್ಳಬೇಕು. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಅಗತ್ಯ ಕ್ರಮಗಳನ್ನು ಕೈಗೊಂಡು, ಅಗ್ನಿ ಅವಘಡಗಳನ್ನು ತಡೆಗಟ್ಟಬೇಕು. ಈ ಬಗ್ಗೆ ಅನುಪಾಲನಾ ವರದಿಯನ್ನು ಸಲ್ಲಿಸಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಿಳಿಸಲಾಗಿದೆ. 

ಆಸ್ಪತ್ರೆಗಳ ಎಲ್ಲ ಪ್ರದೇಶಗಳಲ್ಲಿ ಹೊಗೆ ಪತ್ತೆ ಸಾಧನ (ಸ್ಮೋಕ್‌ ಡಿಟೆಕ್ಟರ್) ಹಾಗೂ ‘ಫೈರ್ ಅಲಾರಾಮ್’ ಅಳವಡಿಸಬೇಕು. ವೈದ್ಯಕೀಯ ಆಮ್ಲಜನಕ ಘಟಕಗಳನ್ನೂ ಪರಿಶೀಲಿಸಿ, ಸುರಕ್ಷತೆಗೆ ಆದ್ಯತೆ ನೀಡಬೇಕು. ಸಿಬ್ಬಂದಿಗೂ ತುರ್ತ ಸಂದರ್ಭದಲ್ಲಿ ಪರಿಸ್ಥಿತಿ ಎದುರಿಸುವ ಬಗ್ಗೆ ತರಬೇತಿ ನೀಡಬೇಕು ಎಂದು ಹೇಳಲಾಗಿದೆ. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.