ಬೆಂಗಳೂರು: ಮೈಸೂರು ರಸ್ತೆಯ ಬಾಪೂಜಿನಗರದಲ್ಲಿರುವ ರಾಸಾಯನಿಕ ಕಾರ್ಖಾನೆಯ ಗೋದಾಮಿನಲ್ಲಿ ಸಂಭವಿಸಿದ್ದ ಬೆಂಕಿ ಅವಘಡ ಸಂಬಂಧ, ಕಾರ್ಖಾನೆ ಮಾಲೀಕ ಸಜ್ಜನ್ ರಾವ್ ಹಾಗೂ ಕಂಪನಿ ಉದ್ಯೋಗಿ ಅನಿಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಬೊಮ್ಮಸಂದ್ರದಲ್ಲಿ ರೇಖಾ ಕೆಮಿಕಲ್ಸ್ ಆ್ಯಂಡ್ ಕಾರ್ಪೊರೇಷನ್ ಕಾರ್ಖಾನೆ ಇದೆ. ಸ್ಯಾನಿಟೈಸರ್ ಹಾಗೂ ಥಿನ್ನರ್ ತಯಾರಿಸಲಾಗುತ್ತದೆ. ಅದಕ್ಕೆ ಬೇಕಾದ ರಾಸಾಯನಿಕವನ್ನು ಬಾಪೂಜಿನಗರದ ಗೋದಾಮಿನಲ್ಲಿ ಸಂಗ್ರಹಿಸಲಾಗಿತ್ತು. ಅಲ್ಲಿಯೇ ಮಂಗಳವಾರ ಬೆಂಕಿ ಅವಘಡ ಸಂಭವಿಸಿ, ಗೋದಾಮು ಸುಟ್ಟಿದೆ. ಅಕ್ಕ-ಪಕ್ಕದ ಕಟ್ಟಡಗಳಿಗೂ ಹಾನಿ ಆಗಿದೆ.
‘ಸ್ಪೋಟಕ ವಸ್ತುಗಳ ಕಾಯ್ದೆಯಡಿ ಬ್ಯಾಟರಾಯನೊಉತ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದೀಗ ಸಜ್ಜನ್ ರಾವ್ ಹಾಗೂ ಅನಿಲ್ ಅವರನ್ನು ಬಂಧಿಸಲಾಗಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.