ADVERTISEMENT

ಬೆಂಗಳೂರು | ಕಾರಿನಲ್ಲಿ ಬೆಂಕಿ: ಚಾಲಕ ಪಾರು

​ಪ್ರಜಾವಾಣಿ ವಾರ್ತೆ
Published 19 ಜುಲೈ 2024, 22:22 IST
Last Updated 19 ಜುಲೈ 2024, 22:22 IST
<div class="paragraphs"><p>ಸಾಂಕೇತಿಕ ಚಿತ್ರ( ಸಂಗ್ರಹ ಚಿತ್ರ)</p></div>

ಸಾಂಕೇತಿಕ ಚಿತ್ರ( ಸಂಗ್ರಹ ಚಿತ್ರ)

   

ಬೆಂಗಳೂರು:‌ ಪಶ್ಚಿಮ ವಿಭಾಗದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಪಂತರಪಾಳ್ಯ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರು ಚಲಿಸುತ್ತಿದ್ದ ವೇಳೆ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ತಕ್ಷಣವೇ ಕಾರು ನಿಲ್ಲಿಸಿ ಇಳಿದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕದ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ADVERTISEMENT

ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅವಘಡಕ್ಕೆ ಕಾರಣವಾಗಿದೆ ಎಂದು ಬ್ಯಾಟರಾಯನಪುರ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.