ADVERTISEMENT

ಮಲ್ಲೇಶ್ವರ ಬಳಿ ಮನೆಯಲ್ಲಿ ಬೆಂಕಿ: ಮಹಿಳೆ ಸಜೀವ ದಹನ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2023, 12:22 IST
Last Updated 7 ಫೆಬ್ರುವರಿ 2023, 12:22 IST
   

ಬೆಂಗಳೂರು: ಮಲ್ಲೇಶ್ವರ ಠಾಣೆ ವ್ಯಾಪ್ತಿಯಲ್ಲಿ ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮನೆಯಿಂದ ಹೊರಬರಲು ಸಾಧ್ಯವಾಗದೇ ಮೇರಿ (55) ಎಂಬುವರು ಸಜೀವವಾಗಿ ದಹನವಾಗಿದ್ದಾರೆ.


ಮಂತ್ರಿ ಸ್ಕ್ವೇರ್ ಮಾಲ್ ಹಿಂಭಾಗದಲ್ಲಿರುವ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸುತ್ತಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣವೇನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ.
ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಅನುಮಾನವಿದ್ದು, ಬೆಸ್ಕಾಂ ಅಧಿಕಾರಿಗಳೂ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT