ADVERTISEMENT

ಇಂಕ್‌ ಫ್ಯಾಕ್ಟರಿ ಬೆಂಕಿಗಾಹುತಿ 

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2020, 20:18 IST
Last Updated 1 ಏಪ್ರಿಲ್ 2020, 20:18 IST
ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿದರು  – ಪ್ರಜಾವಾಣಿ ಚಿತ್ರ
ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿದರು – ಪ್ರಜಾವಾಣಿ ಚಿತ್ರ   

ಬೆಂಗಳೂರು: ಬನ್ನೇರುಘಟ್ಟ ಠಾಣಾ ವ್ಯಾಪ್ತಿಯಲ್ಲಿ ಆನೇಕಲ್‌ ಸಮೀಪ ಸಕ್ಕಲವಾರ ಗ್ರಾಮದಲ್ಲಿರುವ ಶ್ರೀ ಕಲರ್‌ ಇಂಕ್‌ ಫ್ಯಾಕ್ಟರಿಯಲ್ಲಿ ಬುಧವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಬೆಂಕಿ ಆಕಸ್ಮಿಕ ಸಂಭವಿಸಿದೆ.

ಲಾಕ್‌ಡೌನ್ ಹಿನ್ನೆಲೆಯಲ್ಲಿ ಫ್ಯಾಕ್ಟರಿ 10 ದಿನಗಳಿಂದ ಬಂದ್‌ ಆಗಿತ್ತು. ಇಂಕ್‌ ಅಗತ್ಯ ವಸ್ತುಗಳ ವ್ಯಾಪ್ತಿಯಲ್ಲಿ ಇರುವುದರಿಂದ ಫ್ಯಾಕ್ಟರಿ ಕಾರ್ಯಾಚರಣೆ ಆರಂಭಿಸಲು ಬುಧವಾರ ಅನುಮತಿ ಸಿಕ್ಕಿತ್ತು. ಈ ಕಾರಣಕ್ಕೆ ಕೆಲವು ಕಾರ್ಮಿಕರು ಅಲ್ಲಿಗೆ ಬಂದಿದ್ದರು. ಇದೇ ವೇಳೆ ಅವಘಡ ಸಂಭವಿಸಿದ್ದು, ವಿದ್ಯುತ್ ಶಾರ್ಟ್‌ ಸರ್ಕಿಟ್‌ ಆಗಿರಬಹುದೆಂದು ಶಂಕಿಸಲಾಗಿದೆ.

ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸಲು ಹರಸಾಹಸಪಟ್ಟರು. ಫ್ಯಾಕ್ಟರಿ ಮುಂಭಾಗದಲ್ಲಿ ನಿಲ್ಲಿಸಿದ್ದ ಟೆಂಪೊ ಮತ್ತು ಹಳೆ ವ್ಯಾಗನ್‌ ಕಾರು ಕೂಡಾ ಆಹುತಿ ಆಗಿದೆ. ಅಂದಾಜು ₹ 50 ಲಕ್ಷ ನಷ್ಟ ಉಂಟಾಗಿದೆ’ ಎಂದು ಮಾಲೀಕ ಮಯೂರ್‌ ಮಾಂಗೆ ತಿಳಿಸಿದರು. ಬನ್ನೇರುಘಟ್ಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.