ADVERTISEMENT

ಮೇಲ್ಸೇತುವೆಯಲ್ಲಿ ಹೊತ್ತಿ ಉರಿದ ಬೈಕ್

​ಪ್ರಜಾವಾಣಿ ವಾರ್ತೆ
Published 21 ಜೂನ್ 2020, 4:52 IST
Last Updated 21 ಜೂನ್ 2020, 4:52 IST
ಬೆಂಕಿ ಹೊತ್ತಿಕೊಂಡು ಉರಿದ ಬೈಕ್‌
ಬೆಂಕಿ ಹೊತ್ತಿಕೊಂಡು ಉರಿದ ಬೈಕ್‌   

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಶುಕ್ರವಾರ ರಾತ್ರಿ ಚಲಿಸುತ್ತಿದ್ದ ಬೈಕೊಂದು ಬೆಂಕಿಯಿಂದ ಹೊತ್ತಿ ಉರಿದಿದ್ದು, ಸವಾರ ಕೂಡಾ ಗಾಯಗೊಂಡಿದ್ದಾರೆ.

ಹೆಬ್ಬಾಳ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ. ಗಾಯಾಳು ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಮೇಲ್ಸೇತುವೆಯಲ್ಲಿ ಸಾಗುತ್ತಿದ್ದಾಗ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಗಾಬರಿಗೊಂಡ ಸವಾರ, ರಸ್ತೆ ಪಕ್ಕದಲ್ಲಿ ಬೈಕ್ ನಿಲ್ಲಿಸಿ ಸ್ಥಳದಿಂದ ಓಡಿದ್ದ. ಆತನಿಗೂ ಸ್ವಲ್ಪ ಬೆಂಕಿ ತಾಗಿತ್ತು’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ADVERTISEMENT

‘ಕೆಲ ನಿಮಿಷಗಳಲ್ಲೇ ಬೈಕ್ ಪೂರ್ತಿ ಸುಟ್ಟು ಹೋಯಿತು. ಸವಾರನನ್ನು ಸ್ಥಳೀಯರೇ ಆಸ್ಪತ್ರೆಗೆ ಕರೆದೊಯ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು. ಬೆಂಕಿ ಹೊತ್ತಿಕೊಳ್ಳಲು ಕಾರಣ ಗೊತ್ತಾಗಿಲ್ಲ’ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.