ADVERTISEMENT

ಶೀತಲೀಕರಣ ವಾಹನದಲ್ಲಿ ಮೀನು ಮಾರಾಟಕ್ಕೆ ವ್ಯವಸ್ಥೆ: ಸಿಎಂ ಬೊಮ್ಮಾಯಿ ಭರವಸೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2022, 1:53 IST
Last Updated 5 ಜುಲೈ 2022, 1:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ವಾಹನಗಳಿಗೆ ಶೀತಲೀಕರಣ ಘಟಕ ಅಳವಡಿಸಿ ರಾಜ್ಯದ ವಿವಿಧೆಡೆ ಮೀನು ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು. ಈ ಯೋಜನೆಗೆ ಸದ್ಯದಲ್ಲೇ ಅನುದಾನ ಬಿಡುಗಡೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಸೋಮವಾರ ಕಬ್ಬನ್‌ ಪಾರ್ಕ್‌ನ ಸರ್ಕಾರಿ ಮತ್ಸ್ಯಾಲಯದ ಆಧುನೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ‘ರಾಜ್ಯದಲ್ಲಿ ಒಳನಾಡು, ಸಮುದ್ರ ಮೀನುಗಾರಿಕೆಗೆ ಸಾಕಷ್ಟು ಅವಕಾಶಗಳಿವೆ. ಮೀನು ಉತ್ಪಾದನೆ, ಸಂಸ್ಕರಣೆ, ರಫ್ತಿಗೆ ಆದ್ಯತೆ ನೀಡಲಾಗುವುದು. ರಾಜ್ಯದ 2,500 ಕೆರೆಗಳಲ್ಲಿ ಒಳನಾಡು ಮೀನುಗಾರಿಕೆಗೆ ಉತ್ತೇಜನ ನೀಡಲಾಗುವುದು’ ಎಂದು ಹೇಳಿದರು.

‘ಮೀನುಗಾರರಿಗೆ 10 ಸಾವಿರ ಮನೆ ನಿರ್ಮಿಸಲಾಗುವುದು. ಮೀನುಗಾರರ ಮಕ್ಕಳಿಗೆ ವಿದ್ಯಾನಿಧಿ ಅಡಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಒಳನಾಡು ಮೀನುಗಾರಿಕೆಗೆ ಮೀನು ಮರಿ ಉತ್ಪಾದನೆ ಹೆಚ್ಚಿಸಲಾಗುವುದು’ ಎಂದರು.

ADVERTISEMENT

‘ಕರಾವಳಿಯಲ್ಲಿ ಆಳ ಮೀನುಗಾರಿಕೆಗೆ ಬೋಟ್‌ಗಳು ಇರಲಿಲ್ಲ. ಆಳ ಮೀನುಗಾರಿಕೆಗೆ ಅನುಕೂಲಕ್ಕೆ 100 ಹೊಸ ಬೋಟ್‌ ವಿತರಣೆ ಮಾಡಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.