ADVERTISEMENT

ಕೆ.ಆರ್.ಪುರಂ: ಐದು ಬೀದಿನಾಯಿಗಳ ಸಾವು

​ಪ್ರಜಾವಾಣಿ ವಾರ್ತೆ
Published 27 ಜೂನ್ 2025, 17:53 IST
Last Updated 27 ಜೂನ್ 2025, 17:53 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಕೆ.ಆರ್.ಪುರಂನ ಭಟ್ಟರಹಳ್ಳಿಯಲ್ಲಿ ಐದು ಬೀದಿನಾಯಿಗಳು ರಕ್ತ ವಾಂತಿ ಮಾಡಿಕೊಂಡು ಮೃತಪಟ್ಟಿದ್ದು, ಕಿಡಿಗೇಡಿಗಳು ವಿಷ ಹಾಕಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಆರು ನಾಯಿಗಳ ಪೈಕಿ ಐದು ಸಾವಿಗೀಡಾಗಿವೆ. ನಾಯಿಗಳು ಒದ್ದಾಡಿ ಪ್ರಾಣಬಿಡುವ ದೃಶ್ಯ ಸಿಸಿಟಿವಿ ಗುರುವಾರ ರಾತ್ರಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ADVERTISEMENT

ಈ ಸಂಬಂಧ ಬಿಬಿಎಂಪಿ ಅಧಿಕಾರಿಗಳು ಕೆ.ಆರ್.ಪುರಂ ಪೊಲೀಸ್​​ ಠಾಣೆಯಲ್ಲಿ ದೂರು ನೀಡಿದ್ದಾರೆ. 

ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಮೃತ ನಾಯಿಗಳ ರಕ್ತದ ಮಾದರಿ ರವಾನೆ ಮಾಡಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.