ADVERTISEMENT

ಸಾಕ್ಷಿದಾರರಿಗೆ ಕೊಲೆ ಬೆದರಿಕೆ: 5 ವರ್ಷ ಜೈಲು ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2022, 16:34 IST
Last Updated 1 ಸೆಪ್ಟೆಂಬರ್ 2022, 16:34 IST

ಬೆಂಗಳೂರು: ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸಾಕ್ಷಿ ಹೇಳದಂತೆ ಸಾಕ್ಷಿದಾರರಿಗೆ ಕೊಲೆ ಬೆದರಿಕೆಯೊಡ್ಡಿದ್ದ ಅಪರಾಧಿ ರಮೇಶ್ (30) ಎಂಬಾತನಿಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿ ನಗರದ ಸಿಸಿಎಚ್ 57ನೇ ನ್ಯಾಯಾಲಯ ಆದೇಶ ಹೊರಡಿಸಿದೆ.

‘2016ರಲ್ಲಿ ದಾಖಲಾಗಿದ್ದ ಅಪರಾಧ ಪ್ರಕರಣವೊಂದರಲ್ಲಿ ಮರಿಯಪ್ಪನಪಾಳ್ಯ ನಿವಾಸಿ ರಮೇಶ್‌ನನ್ನು ಬಂಧಿಸಲಾಗಿತ್ತು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ರಮೇಶ್, ‍ಪ್ರಕರಣದ ಸಾಕ್ಷಿದಾರರಿಗೆ ಕರೆ ಮಾಡಿ ಕೊಲೆ ಬೆದರಿಕೆಯೊಡ್ಡಿದ್ದ. ಈ ಬಗ್ಗೆ ಕೆ.ಪಿ.ಅಗ್ರಹಾರ ಠಾಣೆಯಲ್ಲಿ 2018ರಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿತ್ತು’ ಎಂದು ಪೊಲೀಸ್ ಮೂಲಗಳು ಹೇಳಿವೆ.

ಪ್ರಕರಣದ ತನಿಖೆ ಕೈಗೊಂಡಿದ್ದ ಕೆ.ಪಿ. ಅಗ್ರಹಾರ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶರಾದ ಟಿ. ಗೋವಿಂದಯ್ಯ ವಿಚಾರಣೆ ನಡೆಸಿ ಆದೇಶ ಹೊರಡಿಸಿದ್ದಾರೆ. ಪಬ್ಲಿಕ್ ಪ್ರಾಸಿಕ್ಯೂಟರ್ ವೀಣಾ ವಾದಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.