ADVERTISEMENT

ಐದು ವರ್ಷದ ಕಾನೂನು ವಿದ್ಯಾರ್ಥಿಗಳ ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2021, 15:15 IST
Last Updated 23 ಡಿಸೆಂಬರ್ 2021, 15:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಐದು ವರ್ಷದ ಕಾನೂನು ಪದವಿಯ ಎರಡು ಮತ್ತು ನಾಲ್ಕನೇ ಸೆಮಿಸ್ಟರ್ ಪರೀಕ್ಷೆ (ಆಫ್‌ಲೈನ್) ನಡೆಸಲು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ಕೆಎಸ್‌ಎಲ್‌ಯು) ಹೊರಡಿಸಿದ್ದ ಸುತ್ತೋಲೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ‌

ಕೋಲಾರದಕೆ.ಪಿ. ಪ್ರಭುದೇವ್ ಸೇರಿದಂತೆ ಒಂಬತ್ತು ವಿದ್ಯಾರ್ಥಿಗಳು ಸಲ್ಲಿಸಿದ್ದ ರಿಟ್‌ ಅರ್ಜಿಗಳ ವಿಚಾರಣೆ ನಡೆಸಿ, ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ಪ್ರಕಟಿಸಿತು.

‘ಮೂರು ವರ್ಷದ ಕಾನೂನು ಪದವಿಯ ಎರಡು ಮತ್ತು ನಾಲ್ಕನೇ ಸೆಮಿಸ್ಟರ್ ಪರಿಕ್ಷೆ ನಡೆಸಲು ವಿಶ್ವವಿದ್ಯಾಲಯ ಹೊರಡಿಸಿದ ಸುತ್ತೋಲೆಯನ್ನು ಇದೇ 14ರಂದು ಧಾರವಾಡ ಹೈಕೋರ್ಟ್ ಪೀಠ ರದ್ದುಪಡಿಸಿದೆ. ಇದೇ ಮಾದರಿಯಲ್ಲಿ ಐದು ವರ್ಷದ ಕಾನೂನು ಪದವಿಯ ಎರಡು ಮತ್ತು ನಾಲ್ಕನೇ ಸೆಮಿಸ್ಟರ್ ಪರೀಕ್ಷೆಯನ್ನೂ ರದ್ದುಪಡಿಸಬೇಕು’ ಎಂದು ಕೋರಿ ವಿದ್ಯಾರ್ಥಿಗಳು ಈ ಅರ್ಜಿ ಸಲ್ಲಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.