
ನೆಲಮಂಗಲ: ಮುಖ್ಯರಸ್ತೆಯ ವಿಭಜಕದ ದೀಪದ ಕಂಬಗಳಿಗೆ ಅಳವಡಿಸಿದ್ದ ಫ್ಲೆಕ್ಸ್ ತಗುಲಿ ಬೈಕ್ ಸವಾರ ಮೃತಪಟ್ಟ ಘಟನೆ ಪಟ್ಟಣದಲ್ಲಿ ನಡೆದಿದೆ.
ತೇಜಸ್(27) ಮೃತ ಯುವಕ.
ಪಟ್ಟಣದ ಕೆ.ಇ.ಬಿ ಎದುರು ವಿಭಜಕದ ವಿದ್ಯುತ್ ಕಂಬಗಳಿಗೆ ಅಳವಡಿಸಿರುವ ಫ್ಲೆಕ್ಸ್ ಸಡಿಲವಾಗಿ ರಸ್ತೆಯ ಕಡೆ ವಾಲಿದ್ದು, ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ ಫ್ಲೆಕ್ಸ್ ತಲೆಗೆ ತಗುಲಿತ್ತು. ಆಗ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತೇಜಸ್ ಅವರು ರಸ್ತೆಗೆ ಬಿದ್ದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಮೃತಪಟ್ಟಿದ್ದಾರೆ.
ಮೃತ ತೇಜಸ್ ಅವರು ಜರ್ಮನಿಯಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿದ್ದರು. ಕಳೆದವಾರ ನೆಲಮಂಗಲಕ್ಕೆ ಬಂದಿದ್ದರು. ಎರಡು ದಿನದ ಹಿಂದೆ ಸ್ನೇಹಿತರೊಬ್ಬರ ಮದುವೆ ಸಮಾರಂಭಕ್ಕೂ ಹೋಗಿಬಂದಿದ್ದರು.
ತುಮಕೂರು– ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಫ್ಲೆಕ್ಸ್ ಹರಿದು ಕಾರಿನ ಮೇಲೆ ಬಿದ್ದು ಪ್ರಾಣಾಪಾಯದಿಂದ ಪಾರಾದ ಘಟನೆ ಕೆಲವು ತಿಂಗಳ ಹಿಂದೆ ನಡೆದಿತ್ತು.
ಸ್ಥಳೀಯ ಆಡಳಿತ ಫ್ಲೆಕ್ಸ್‌ಗಳನ್ನು ತೆರವುಗೊಳಿಸಬೇಕು. ಅನಧಿಕೃತವಾಗಿ ಫ್ಲೆಕ್ಸ್‌ಗಳನ್ನು ಅಳವಡಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮೃತ ತೇಜಸ್‌ನ ಸ್ನೇಹಿತ ಸೈಯದ್ ಇರ್ಫಾನ್ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.