ಬೆಂಗಳೂರು: ಗಣರಾಜ್ಯೋತ್ಸವ ಅಂಗವಾಗಿ ಲಾಲ್ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ‘ಬೆಂಗಳೂರು ನಗರದ ಇತಿಹಾಸ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ’ಕ್ಕೆ ಸೋಮವಾರ ತೆರೆ ಬಿದ್ದಿತು.
‘ಸೋಮವಾರ 4,285 ವಯಸ್ಕರು, 500 ಮಕ್ಕಳು ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಿದರು. ₹2,99,950 ಪ್ರವೇಶ ಶುಲ್ಕ ಸಂಗ್ರಹವಾಗಿದೆ’ ಎಂದು ಲಾಲ್ಬಾಗ್ ಉದ್ಯಾನದ ಉಪನಿರ್ದೇಶಕಿ ಕುಸುಮಾ ತಿಳಿಸಿದರು.
‘ತೋಟಗಾರಿಕೆ ಇಲಾಖೆ ಏರ್ಪಡಿಸಿದ್ದ ಈ ಪ್ರದರ್ಶನದಲ್ಲಿ ಬೆಂಗಳೂರಿನ 1500 ವರ್ಷಗಳ ಇತಿಹಾಸ ಅನಾವರಣಗೊಳಿಸಲಾಗಿತ್ತು. ಈ ಬಾರಿಯ ಪ್ರದರ್ಶನಕ್ಕೆ 2.50 ಕೋಟಿ ಖರ್ಚು ಮಾಡಲಾಗಿತ್ತು. 3,30,257 ಜನ ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಿದ್ದು, ₹1,97,55,674 ಸಂಗ್ರಹವಾಗಿದೆ’ ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಜಗದೀಶ ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.