ADVERTISEMENT

ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದು

​ಪ್ರಜಾವಾಣಿ ವಾರ್ತೆ
Published 8 ಜನವರಿ 2021, 19:41 IST
Last Updated 8 ಜನವರಿ 2021, 19:41 IST
ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ-ಸಾಂದರ್ಭಿಕ ಚಿತ್ರ
ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ-ಸಾಂದರ್ಭಿಕ ಚಿತ್ರ   

ಬೆಂಗಳೂರು: ಲಾಲ್‌ಬಾಗ್‌ ಉದ್ಯಾನದಲ್ಲಿ ನಡೆಯಬೇಕಿದ್ದ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವನ್ನು ಕೊರೊನಾ ಕಾರಣದಿಂದ ರದ್ದುಗೊಳಿಸಲುಮೈಸೂರು ಉದ್ಯಾನಕಲಾ ಸಂಘ ಮತ್ತು ತೋಟಗಾರಿಕೆ ಇಲಾಖೆ ನಿರ್ಧರಿಸಿವೆ.

ಪ್ರತಿವರ್ಷ ಜನವರಿ ಮತ್ತು ಆಗಸ್ಟ್‌ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯುತ್ತಿತ್ತು. ಕೊರೊನಾ ಕಾರಣದಿಂದಲೇ ಕಳೆದ ಆಗಸ್ಟ್‌ನಲ್ಲೂ ಪ್ರದರ್ಶನ ರದ್ದುಗೊಂಡಿತ್ತು. ಜನವರಿ ವೇಳೆಗೆ ಪರಿಸ್ಥಿತಿ ನಿಯಂತ್ರಣಕ್ಕೆ ಬರುವ ನಿರೀಕ್ಷೆಯಿಂದ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ಆಯೋಜಿಸಲು ಉದ್ದೇಶಿಸಲಾಗಿತ್ತು.

‘ಕೊರೊನಾ ವೈರಸ್‌ ಹರಡುವ ಸಾಧ್ಯತೆಗಳು ಇರುವುದರಿಂದ ಪ್ರದರ್ಶನ ರದ್ದು ಪಡಿಸುವುದು ಸೂಕ್ತ ಎಂದು ಇತ್ತೀಚೆಗೆ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಲಾಲ್‌ಬಾಗ್‌ನಲ್ಲಿ ಈವರೆಗೆ ಮೂರು ಬಾರಿ ಫಲಪುಷ್ಪ ಪ್ರದರ್ಶನ ರದ್ದಾಗಿದೆ. ಆಗಸ್ಟ್‌ನಲ್ಲಿ ಪ್ರದರ್ಶನ ನಡೆಯಲಿದೆ’ ಎಂದುಮೈಸೂರು ಉದ್ಯಾನ ಕಲಾ ಸಂಘದ ಪದಾಧಿಕಾರಿಗಳು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.