ADVERTISEMENT

ಫುಡ್‌ ಡೆಲಿವರಿ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 9 ಜನವರಿ 2026, 20:07 IST
Last Updated 9 ಜನವರಿ 2026, 20:07 IST
<div class="paragraphs"><p>ಬಂಧನ  </p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ಫುಡ್‌ ಡೆಲಿವರಿ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ ನಡೆಸಿದ್ದ ಇಬ್ಬರನ್ನು ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸೀತಾರಾಮಪಾಳ್ಯದ ಬಳಿಯ ಹೂಡಿಯ ಜಗತ್‌ (28) ಹಾಗೂ ಧರ್ಮ (20) ಬಂಧಿತರು.

ADVERTISEMENT

ಫುಡ್‌ ಡೆಲಿವರಿ ಹುಡುಗ ದಿಲೀಪ್‌ ಕುಮಾರ್ ಸ್ಕೂಟರ್‌ನಲ್ಲಿ ತೆರಳುವಾಗ ರಸ್ತೆಯ ತಿರುವಿನ ಬಳಿ ಇಬ್ಬರು ಆರೋಪಿಗಳು ಸ್ಕೂಟರ್‌ನಲ್ಲಿ ಬಂದಿದ್ದರು. ಡೆಲಿವರಿ ಯುವಕ ತಕ್ಷಣ ಸ್ಕೂಟರ್ ನಿಲ್ಲಿಸಿದ್ದರು. ಆದರೆ, ಆರೋಪಿಗಳು ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಿದ್ದಿದ್ದರು. ಇದರಿಂದ ಸಿಟ್ಟಿಗೆದ್ದು ಹೆಲ್ಮೆಟ್‌ನಿಂದ ಡೆಲಿವರಿ ಯುವಕನ ಮೇಲೆ ಹಲ್ಲೆ ನಡೆಸಿದ್ದರು. ಇದನ್ನು ಕಂಡು ತರಾಟೆಗೆ ತೆಗೆದುಕೊಂಡ ಸ್ಥಳೀಯರ ಮೇಲೆ ಆರೋಪಿಗಳು ಹಲ್ಲೆಗೆ ಮುಂದಾಗಿದ್ದರು. ಬಳಿಕ ಸ್ಥಳೀಯರೇ ಆರೋಪಿಗಳ ಮೇಲೆ ಹಲ್ಲೆ ನಡೆಸಿದ್ದರು ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.