ADVERTISEMENT

‘ಆಹಾರ ನಿರೀಕ್ಷಕರ ಜೀವಕ್ಕೆ ಬೆಲೆ ಇಲ್ಲವೇ’

​ಪ್ರಜಾವಾಣಿ ವಾರ್ತೆ
Published 8 ಮೇ 2021, 4:57 IST
Last Updated 8 ಮೇ 2021, 4:57 IST

ಬೆಂಗಳೂರು: ಪಡಿತರ ವಿತರಣೆಗೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆಗೆ ಆದೇಶಿಸಿರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಆಹಾರ ನಿರೀಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿರುವವರಿಗೆ ಪಡಿತರ ನೀಡುವ ಸಂಬಂಧ ಸ್ಥಳ ಪರಿಶೀಲನೆ ಮಾಡಲು ಆಹಾರ ಸಚಿವರು ಜ.17ರಂದು ಸೂಚಿಸಿದ್ದರು. ಆದರೆ, ಇಲಾಖೆಯು ಆ ಆದೇಶವನ್ನು ಈಗ ಜಾರಿ ಮಾಡಲು ಮುಂದಾಗಿದ್ದಾರೆ. ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ, ಕರ್ಫ್ಯೂ ಜಾರಿಯಲ್ಲಿರುವ ಈ ಸಂದರ್ಭದಲ್ಲಿ ಆದೇಶ ಪಾಲನೆ ಸಾಧ್ಯವೇ’ ಎಂದು ಆಹಾರ ನಿರೀಕ್ಷಕರು ಪ್ರಶ್ನಿಸಿದ್ದಾರೆ.

‘ಕಳೆದ ವರ್ಷ ಇದೇ ಸಂದರ್ಭದಲ್ಲಿಯೂ ಕೋವಿಡ್‌ ಪ್ರಕರಣಗಳು ಹೆಚ್ಚಿದ್ದವು. ಆಗ, ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದ್ದವರಿಗೆ 10 ಕೆಜಿ ಪಡಿತರ ನೀಡಲಾಗಿತ್ತು. ಯಾವುದೇ ಸ್ಥಳ ಪರಿಶೀಲನೆ ನಡೆಸಿರಲಿಲ್ಲ. ಈಗಲೂ ಅದೇ ನಿಯಮ ಪಾಲಿಸಬಹುದು. ಸ್ಥಳ ಪರಿಶೀಲನೆ ನಡೆಸುವ ತುರ್ತು ಈಗಿಲ್ಲ’ ಎಂದು ಅವರು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.