ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ವಿದೇಶಿ ಪೆಡ್ಲರ್‌ನನ್ನು ವಿ.ವಿ.ಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆ.ಆರ್.ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು, ನೇಪಾಳ ಮೂಲದ ಪೆಡ್ಲರ್ ಬಳಿ ₹45 ಸಾವಿರ ಮೌಲ್ಯದ 330 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ.
ನೇಪಾಳದಿಂದ ಕಡಿಮೆ ಬೆಲೆಗೆ ಗಾಂಜಾ ತಂದು, ಸ್ಥಳೀಯರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಎಂಬುದು ಪೊಲೀಸರ ವಿಚಾರಣೆ ವೇಳೆ ಗೊತ್ತಾಗಿದೆ.
ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.