ADVERTISEMENT

ಉತ್ತರ ಕನ್ನಡ: ಒತ್ತುವರಿ ತೆರವು ಕ್ರಮಕ್ಕೆ ಹೈಕೋರ್ಟ್‌ ತಡೆ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2019, 20:06 IST
Last Updated 24 ಏಪ್ರಿಲ್ 2019, 20:06 IST

ಬೆಂಗಳೂರು: ‘ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಅರಣ್ಯ ವಾಸಿಗಳನ್ನು ತೆರವುಗೊಳಿಸುವ ದಿಸೆಯಲ್ಲಿ ಯಾವುದೇ ಕ್ರಮಕ್ಕೆ ಮುಂದಾಗಬಾರದು’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶಿಸಿದೆ.

ಅರಣ್ಯ ವಾಸಿಗಳ 60 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ವಜಾ ಮಾಡಿ ಅರ್ಜಿದಾರರನ್ನು ಒಕ್ಕಲೆಬ್ಬಿಸುವ ಜಿಲ್ಲಾಡಳಿತದ ಕ್ರಮಕ್ಕೆ, ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್‌.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ಮಧ್ಯಂತರ ತಡೆ ನೀಡಿದೆ.

ಈ ಸಂಬಂಧ ‘ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ’ ಅಧ್ಯಕ್ಷ ಎ.ರವೀಂದ್ರ ನಾಯ್ಕ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.