ADVERTISEMENT

ಉಸಿರಾಟದ ಸಮಸ್ಯೆ: ಮಾಜಿ ಸಿಎಂ ಎಸ್.ಎಂ. ಕೃಷ್ಣ ಮಣಿಪಾಲ್ ಆಸ್ಪತ್ರೆಗೆ ದಾಖಲು

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2022, 19:57 IST
Last Updated 25 ಸೆಪ್ಟೆಂಬರ್ 2022, 19:57 IST
ಆಸ್ಪತ್ರೆಯಲ್ಲಿ ಎಸ್‌.ಎಂ. ಕೃಷ್ಣ ಅವರ ಆರೋಗ್ಯ ವಿಚಾರಿಸಿದ ಬಸವರಾಜ ಬೊಮ್ಮಾಯಿ
ಆಸ್ಪತ್ರೆಯಲ್ಲಿ ಎಸ್‌.ಎಂ. ಕೃಷ್ಣ ಅವರ ಆರೋಗ್ಯ ವಿಚಾರಿಸಿದ ಬಸವರಾಜ ಬೊಮ್ಮಾಯಿ   

ಬೆಂಗಳೂರು: ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಮುಖಂಡ ಎಸ್.ಎಂ. ಕೃಷ್ಣ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

90 ವರ್ಷದ ಅವರಿಗೆ ಶನಿವಾರ ರಾತ್ರಿಯೇ ಜ್ವರ ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಶ್ವಾಸಕೋಶ ತಜ್ಞರಾದ ಡಾ. ಸತ್ಯನಾರಾಯಣ ಮೈಸೂರು ಮತ್ತು ಡಾ. ಸುನೀಲ್ ಕಾರಂತ್ ನೇತೃತ್ವದ ವೈದ್ಯರ ವಿಶೇಷ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ.

‘ಅವರಿಗೆ ಕೃತಕ ಉಸಿರಾಟದ ಸಂಪರ್ಕ ಕಲ್ಪಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ’ ಎಂದು ಆಸ್ಪತ್ರೆ ತಿಳಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ಬಿ.ಎಸ್. ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸೇರಿ ಹಲವರು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು.

ADVERTISEMENT

‘ಎಸ್.ಎಂ ಕೃಷ್ಣ ಅವರು ಎರಡು, ‌ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಮನೆಗೆ ತೆರಳಲಿದ್ದಾರೆ. ಅವರುಜ್ವರದಿಂದ ಬಳಲುತ್ತಿದ್ದರು. ಹೀಗಾಗಿ, ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿದೆ.ನಿರಂತರ ಚಿಕಿತ್ಸೆಯಿಂದ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಜನರು ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ’ ಎಂದು ಬೊಮ್ಮಾಯಿ ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.