ಜೆಡಿಎಸ್
ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಚ್.ನಿಂಗಪ್ಪ ಅವರು ಮಂಗಳವಾರ ಜೆಡಿಎಸ್ ಸೇರಲಿದ್ದಾರೆ.
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ನಿಂಗಪ್ಪ ಅವರ ಮನೆಗೆ ಇತ್ತೀಚೆಗೆ ಭೇಟಿ ನೀಡಿದ್ದು, ಪಕ್ಷಕ್ಕೆ ಮರಳುವಂತೆ ಮನವೊಲಿಕೆ ನಡೆಸಿದ್ದರು. ಜೆಡಿಎಸ್ ರಾಜ್ಯ ಘಟಕದ ಕಚೇರಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆಯುವ ಕಾರ್ಯಕ್ರಮದಲ್ಲಿ ಅವರು ಪಕ್ಷ ಸೇರಲಿದ್ದಾರೆ ಎಂದು ಜೆಡಿಎಸ್ ಪ್ರಕಟಣೆ ತಿಳಿಸಿದೆ.
ನಿಂಗಪ್ಪ ಜೆಡಿಎಸ್‌ನಿಂದ ಸ್ಪರ್ಧಿಸಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. ಡಿ.ಸಿ. ಗೌರಿಶಂಕರ್ ಅವರು ತುಮಕೂರು ಗ್ರಾಮಾಂತರ ಕ್ಷೇತ್ರಕ್ಕೆ ಬಂದ ಬಳಿಕ ನಿಂಗಪ್ಪ ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಸೇರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.