
ಪ್ರಜಾವಾಣಿ ವಾರ್ತೆ
ಬೆಂಗಳೂರು: ಬಸವನಗುಡಿ ಪೊಲೀಸ್ ಠಾಣೆಯ ಮಾಜಿ ರೌಡಿಶೀಟರ್ ಯಶಸ್ವಿನಿ ಅಲಿಯಾಸ್ ಯಶಸ್ವಿನಿಗೌಡ (47) ಅವರನ್ನು ಸಿಸಿಬಿ ಸಂಘಟಿತ ಅಪರಾಧ ದಳದ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಮೋದಿ ಆಸ್ಪತ್ರೆ ರಸ್ತೆಯಲ್ಲಿ ಸೆ.26ರಂದು ಸಂಜೆ 6.30ರ ಸುಮಾರಿಗೆ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಮನೋಜ್ ಅವರನ್ನು ರೌಡಿಗಳ ಗುಂಪು ಅಪಹರಿಸಿತ್ತು. ಆ ಪ್ರಕರಣದಲ್ಲಿ ಯಶಸ್ವಿನಿಗೌಡ ಅವರ ಪಾತ್ರವಿರುವುದು ಕಂಡಬಂದಿತ್ತು. ಕೋಕಾ ಕಾಯ್ದೆ ಅಡಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಆರೋಪಿಯ ವಿರುದ್ಧ ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 10 ಪ್ರಕರಣಗಳು ದಾಖಲಾಗಿವೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.