ಬಂಧನ (ಸಾಂದರ್ಭಿಕ ಚಿತ್ರ)
ಬೆಂಗಳೂರು: ಕಟ್ಟಡ ನಿರ್ಮಾಣ ಕಾರ್ಮಿಕರೊಬ್ಬರನ್ನು ಅಡ್ಡಗಟ್ಟಿ ಹಲ್ಲೆ ಮಾಡಿದ್ದ ಆರೋಪದಡಿ ಬಾಲಕ ಸೇರಿ ನಾಲ್ವರನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಸುಲಿಗೆಗೆ ಯತ್ನ ಹಾಗೂ ಹಲ್ಲೆ ಸಂಬಂಧ ಕಾರ್ಮಿಕ ಭೀಮರಾಯ ಅವರು ದೂರು ನೀಡಿದ್ದರು. ಆರೋಪಿಗಳಾದ ಹೊಸಕೆರೆಹಳ್ಳಿಯ ಮುತ್ತುರಾಜು (23), ಮಹೇಶ್ (18) ಹಾಗೂ ಹರೀಶ್ (19) ಸೇರಿ ನಾಲ್ವರನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಹೊಸಕೆರೆಹಳ್ಳಿಯ ಸಪ್ತಗಿರಿ ಬಡಾವಣೆಯಲ್ಲಿ ವಾಸವಿದ್ದ ದೂರುದಾರ ಭೀಮರಾಯ, ಫೆ.1ರಂದು ರಾತ್ರಿ 8 ಗಂಟೆ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ಹೊರಟಿದ್ದರು. ಆಟೊದಲ್ಲಿ ಬಂದಿದ್ದ ಆರೋಪಿಗಳು, ಭೀಮರಾಯ ಅವರನ್ನು ಅಡ್ಡಗಟ್ಟಿ ಹಣ ನೀಡುವಂತೆ ಪೀಡಿಸಿ, ಹಾಕಿ ಸ್ಟಿಕ್‌ನಿಂದ ಭೀಮರಾಯ ಅವರ ತಲೆ, ಕೈಗೆ ಹೊಡೆದು ಪರಾರಿಯಾಗಿದ್ದರು. ಗಾಯಗೊಂಡಿದ್ದ ದೂರುದಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.