ಬೆಂಗಳೂರು: ನಗರದಲ್ಲಿ ಮೊಬೈಲ್ ಕಳ್ಳರ ಗ್ಯಾಂಗ್ ಮತ್ತೆ ಸಕ್ರಿಯವಾಗಿದ್ದು, ಮಂಗಳವಾರ ಬೆಳಿಗ್ಗೆ ನಾಲ್ಕು ಸ್ಥಳದಲ್ಲಿ ಮೊಬೈಲ್ ದರೋಡೆ ನಡೆಸಲಾಗಿದೆ.
ಜೆ.ಪಿ. ನಗರದ ಎರಡು ಕಡೆ, ವರ್ತೂರು ಹಾಗೂ ಬೈಯಪ್ಪನಹಳ್ಳಿಯಲ್ಲಿ ಮೊಬೈಲ್ ಕಳ್ಳತನ ಪ್ರಕರಣಗಳು ನಡೆದಿವೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಘಟನಾ ಸ್ಥಳದ ಸುತ್ತಮುತ್ತಲ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಲಾಗಿದೆ. ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರದಲ್ಲಿಯೇ ಬಂಧಿಸಲಾಗುವುದು. ರಸ್ತೆಯಲ್ಲಿ ನಡೆದು ಹೋಗುವಾಗ, ಬಸ್ ಹತ್ತುವಾಗ ಸಾರ್ವಜನಿಕರು ಎಚ್ಚರಿಕೆ ವಹಿಸಿ ಎಂದು ಪೊಲೀಸರು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.