ADVERTISEMENT

ಆ್ಯಪ್‌ ಮೂಲಕ ಡ್ರಗ್ಸ್ ದಂಧೆ: ನಾಲ್ವರ ಬಂಧನ

₹ 4.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2022, 19:13 IST
Last Updated 22 ಅಕ್ಟೋಬರ್ 2022, 19:13 IST
ಆರೋಪಿಗಳಿಂದ ಜಪ್ತಿ ಮಾಡಿರುವ ಡ್ರಗ್ಸ್
ಆರೋಪಿಗಳಿಂದ ಜಪ್ತಿ ಮಾಡಿರುವ ಡ್ರಗ್ಸ್   

ಬೆಂಗಳೂರು: ಮೊಬೈಲ್ ಆ್ಯಪ್ ಮೂಲಕ ಕೇರಳದಿಂದ ಡ್ರಗ್ಸ್ ತರಿಸಿ ನಗರದಲ್ಲಿ ಮಾರುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

‘ಯು. ಯಶವಂತ್, ಕೆ.ಆರ್. ಶಾಲ್ಬೀನ್, ಎಂ.ಎಸ್. ಜಿತಿನ್ ಹಾಗೂ ರೋಹನ್ ಜೊಜೊ ಬಂಧಿತರು. ಇವರಿಂದ ₹ 4.50 ಲಕ್ಷ ಮೌಲ್ಯದ 60 ಗ್ರಾಂ ಎಂಡಿಎಂಎ ಮಾತ್ರೆಗಳು, 2 ಕೆ.ಜಿ ಗಾಂಜಾ ಹಾಗೂ 5 ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

‘ಮೈಕೊ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಸುತ್ತಾಡುತ್ತಿದ್ದ ಆರೋಪಿಗಳು, ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಕೆಲ ಖಾಸಗಿ ಕಂಪನಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಯಿತು’ ಎಂದು ತಿಳಿಸಿದರು.

ADVERTISEMENT

‘ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಹಲವು ತಿಂಗಳಿನಿಂದ ಆರೋಪಿಗಳು ಕೃತ್ಯ ಎಸಗುತ್ತಿರುವ ಮಾಹಿತಿ ಇದೆ. ಮತ್ತಷ್ಟು ಮಂದಿ ಕೃತ್ಯದಲ್ಲಿ ಭಾಗಿಯಾಗಿದ್ದು, ಅವರ ಪತ್ತೆಗಾಗಿ ತನಿಖೆ ಮುಂದುವರಿಸಲಾಗಿದೆ’ ಎಂದು ಸಿಸಿಬಿ ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.