ADVERTISEMENT

‘ಆಶಾ’ ಪ್ರತಿಭಟನೆ ನಾಲ್ಕನೇ ದಿನಕ್ಕೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2020, 20:35 IST
Last Updated 13 ಜುಲೈ 2020, 20:35 IST

ಬೆಂಗಳೂರು: ಮಾಸಿಕ ₹ 12 ಸಾವಿರ ಗೌರವಧನ ಮತ್ತು ಆರೋಗ್ಯ ಸುರಕ್ಷತೆ ಪರಿಕರಗಳನ್ನು ನೀಡಲು ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅನಿರ್ದಿಷ್ಟ ಅವಧಿಯ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ (ಎಐಯುಟಿಯುಸಿ) ನೇತೃತ್ವದಲ್ಲಿ ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿಗಳು, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಮತ್ತು ನಗರ‌ಸಭೆ ಕಚೇರಿಗಳ ಎದುರು ಸೋಮವಾರ ಪ್ರತಿಭಟನೆ ನಡೆಸಿದ ಆಶಾ ಕಾರ್ಯಕತೆಯರು, ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿಗೆ ಒತ್ತಾಯಿಸುವ ಮನವಿ ಸಲ್ಲಿಸಿದರು.

‘ಸರ್ಕಾರ ನಮ್ಮ ಬೇಡಿಕೆಗಳಿಗೆ ಸ್ಪಂದಿಸದ ಕಾರಣ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.ಜಿಲ್ಲೆ, ತಾಲ್ಲೂಕು ಕೇಂದ್ರಗಳಲ್ಲಿ ಮಂಗಳವಾರ ಮಾನವ ಸರಪಳಿ ರಚಿಸಿ ಪ್ರತಿಭಟಿಸಲಾಗುವುದು' ಎಂದು ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.