ADVERTISEMENT

ಇಂಗ್ಲೆಂಡ್‌ನಲ್ಲಿ ಕೆಲಸ ಕೊಡಿಸುವುದಾಗಿ ವಂಚಿಸಿದ್ದ ನೈಜೀರಿಯಾ ಪ್ರಜೆ ಬಂಧನ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2023, 6:29 IST
Last Updated 28 ಫೆಬ್ರುವರಿ 2023, 6:29 IST
   

ಬೆಂಗಳೂರು: ಇಂಗ್ಲೆಂಡ್‌ನ ಕಂಪನಿಯಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಅಭ್ಯರ್ಥಿಗಳಿಂದ ಹಣ ಪಡೆದು ವಂಚಿಸಿದ್ದ ಆರೋಪದಡಿ ನೋಕೊಚಾ ಕಾಸ್ಮಿರ್ ಇಕೆಂಬಾ ಎಂಬುವವರನ್ನು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ನೈಜೀರಿಯಾದ ನೋಕೊಚಾ, ಕೆಲ ವರ್ಷಗಳ ಹಿಂದೆ ಭಾರತಕ್ಕೆ ಬಂದಿದ್ದ. ಹರಿಯಾಣದ ಫರಿದಾಬಾದ್‌ನಲ್ಲಿ ವಾಸವಿದ್ದ. ದೊಡ್ಡಗುಬ್ಬಿ ನಿವಾಸಿಯಾದ ಯುವತಿಯೊಬ್ಬರು ನೀಡಿದ್ದ ದೂರು ಆಧರಿಸಿ ಈತನನ್ನು ಬಂಧಿಸಲಾಗಿದೆ. 6 ಮೊಬೈಲ್, ಲ್ಯಾಪ್‌ಟಾಪ್, ಡೆಬಿಟ್ ಕಾರ್ಡ್, ಸಿಮ್‌ ಕಾರ್ಡ್‌ಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಫರಿದಾಬಾದ್‌ ಮನೆಯಲ್ಲಿರುತ್ತಿದ್ದ ಆರೋಪಿ, ಜಾಲತಾಣ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಜಾಹೀರಾತು ನೀಡುತ್ತಿದ್ದ. ಇಂಗ್ಲೆಂಡ್‌ನ ಕಂಪನಿಗಳಲ್ಲಿ ಕೆಲಸ ಖಾಲಿ ಇರುವುದಾಗಿ ಹೇಳುತ್ತಿದ್ದ. ಅದನ್ನು ನಂಬಿ ಸಂಪರ್ಕಿಸುತ್ತಿದ್ದ ಅಭ್ಯರ್ಥಿಗಳಿಂದ ಹಣ ಪಡೆದು ವಂಚಿಸುತ್ತಿದ್ದ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.