ಎಫ್‌ಐಆರ್
(ಸಾಂದರ್ಭಿಕ ಚಿತ್ರ)
ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದ ಆರೋಪದ ಅಡಿ ತ್ಯಾಗರಾಜ ನಗರದ ಬಿಜಿಎಸ್ ಬ್ಲೂಮ್ ಫೀಲ್ಡ್ ಶಾಲೆಯ ಮುಖ್ಯಸ್ಥ ಗುರಪ್ಪ ನಾಯ್ಡು ಮತ್ತು ಅವರ ಪತ್ನಿ, ಶಾಲೆಯ ಟ್ರಸ್ಟಿ ಬಿ.ಸುನಿತಾ ಅವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಅಗ್ನಿ ಸುರಕ್ಷತಾ ಪ್ರಮಾಣ ಪತ್ರವನ್ನು ನಕಲಿಯಾಗಿ ಸೃಷ್ಟಿಸಿದ್ದರು. ಪ್ರಕರಣವೊಂದರಲ್ಲಿ ಅದನ್ನೇ ಹೈಕೋರ್ಟ್‌ಗೆ ಸಲ್ಲಿಸಿದ್ದರು. ಸಿಬಿಎಸ್‌ಇ ಮಾನ್ಯತೆ ಪಡೆಯಲು ಈ ನಕಲಿ ಪತ್ರವನ್ನು ಬಳಸಿಕೊಂಡಿದ್ದರು ಎಂದು ವಕೀಲೆ ಸುಧಾ ಕಾಟ್ವಾ ಅವರು ದೂರು ನೀಡಿದ್ದರು. ನ್ಯಾಯಾಲಯ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ವಂಚಿಸಿದ್ದ ಆರೋಪದ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.