ADVERTISEMENT

ವಸಿಷ್ಠ ಸೊಸೈಟಿ ಅಧ್ಯಕ್ಷ, ನಿರ್ದೇಶಕಗೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 28 ಜೂನ್ 2021, 21:48 IST
Last Updated 28 ಜೂನ್ 2021, 21:48 IST

ಬೆಂಗಳೂರು: ಠೇವಣಿದಾರರಿಗೆ ವಂಚಿಸಿರುವ ಆರೋಪದಡಿ ಶ್ರೀವಸಿಷ್ಠ ಕೋ–ಆಪರೇಟಿವ್ ಕ್ರೆಡಿಟ್ ಸೊಸೈಟಿ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಹನುಮಂತನಗರ ಠಾಣೆ ಪೊಲೀಸರು, ಸೊಸೈಟಿ ಅಧ್ಯಕ್ಷ ಹಾಗೂ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

‘ಠೇವಣಿದಾರರ ದೂರಿನನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಬಗ್ಗೆ ವಿಚಾರಣೆಗೆ ಹಾಜರಾಗುವಂತೆ ಅಧ್ಯಕ್ಷ ವೇಂಕಟನಾರಾಯಣ ಹಾಗೂ ಅವರ ಮಗನೇ ಆಗಿರುವ ನಿರ್ದೇಶಕ ಕೃಷ್ಣಪ್ರಸಾದ್ ಅವರಿಗೆ ನೋಟಿಸ್ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟ ದಾಖಲಾತಿಗಳನ್ನು ನೀಡಿ ತನಿಖೆಗೆ ಸಹಕರಿಸುವಂತೆ ಕೋರಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘₹ 99 ಲಕ್ಷ ಠೇವಣಿ ಇರಿಸಿದ್ದ ವ್ಯಕ್ತಿ ಸೇರಿದಂತೆ ಹಲವರು, ವಂಚನೆ ಬಗ್ಗೆ ದಾಖಲೆಗಳನ್ನು ನೀಡಿದ್ದಾರೆ. ಅವುಗಳ ಪರಿಶೀಲನೆ ನಡೆದಿದೆ. ಯಾರೆಲ್ಲ ಠೇವಣಿ ಇರಿಸಿದ್ದರು ಹಾಗೂ ಠೇವಣಿ ಮೊತ್ತವೆಷ್ಟು ಎಂಬುದು ತನಿಖೆಯಿಂದ ತಿಳಿಯಬೇಕಿದೆ’ ಎಂದೂ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.