ADVERTISEMENT

ನಿವೃತ್ತ ನ್ಯಾ. ಶೈಲೇಂದ್ರ ಕುಮಾರ್‌ ನೇತೃತ್ವದಲ್ಲಿ ಹೊಸ ಸಮಿತಿ

ಜಿ–ಕೆಟಗರಿ ನಿವೇಶನ ಹಂಚಿಕೆ ಆಕ್ರಮ ಆರೋಪ

​ಪ್ರಜಾವಾಣಿ ವಾರ್ತೆ
Published 7 ಜೂನ್ 2019, 19:35 IST
Last Updated 7 ಜೂನ್ 2019, 19:35 IST
ನ್ಯಾಯಮೂರ್ತಿ ಶೈಲೇಂದ್ರಕುಮಾರ್
ನ್ಯಾಯಮೂರ್ತಿ ಶೈಲೇಂದ್ರಕುಮಾರ್   

ಬೆಂಗಳೂರು: ‘ಜಿ–ಕೆಟಗರಿ ಕೋಟಾದಡಿ ಹಂಚಿಕೆ ಮಾಡಲಾಗಿರುವ 814 ನಿವೇಶನಗಳ ಕಾನೂನು ಬದ್ಧತೆ ಪರಾಮರ್ಶೆ ಮಾಡಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಡಿ.ವಿ.ಶೈಲೇಂದ್ರ ಕುಮಾರ್ ಅಧ್ಯಕ್ಷತೆಯಲ್ಲಿ ಮೂವರು ಸದಸ್ಯರ ನೂತನ ಸಮಿತಿ ರಚನೆಗೆ ಹೈಕೋರ್ಟ್‌ ಆದೇಶಿಸಿದೆ.

‘ಸಮಿತಿ ಅಧ್ಯಕ್ಷರಾಗಿದ್ದ ನ್ಯಾಯಮೂರ್ತಿ ಎ.ಎಂ.ಫಾರೂಕ್ ನಿಧನದ ಕಾರಣ ಹೊಸ ಸಮಿತಿ ರಚನೆಗೆ ನಿರ್ದೇಶನ ನೀಡಬೇಕು’ ಎಂದು ಕೋರಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ಮಾನ್ಯ ಮಾಡಿದೆ.

‘ಸಮಿತಿಯಲ್ಲಿ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್‌ ಮತ್ತು ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿಯನ್ನು ಸೇರ್ಪಡೆ ಮಾಡಬೇಕು. ಈ ಕುರಿತಂತೆ ಅಧಿಸೂಚನೆ ಹೊರಡಿಸಿ’ ಎಂದು ರಾಜ್ಯ ಸರ್ಕಾರಕ್ಕೆ ನ್ಯಾಯಪೀಠ ನಿರ್ದೇಶಿಸಿದೆ. ‘ನೂತನ ಸಮಿತಿಯು ಈ ಹಿಂದಿನ ಸಮಿತಿ ಸಲ್ಲಿಸಿರುವ ವರದಿಗಳನ್ನು ಪರಿಶೀಲನೆ ಮಾಡಬಹುದು’ ಎಂದೂ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.